KCG ಆಸ್ಪತ್ರೆಯಲ್ಲಿ ಮೂಲ ಸೌಕರ್ಯವೇ ಇಲ್ಲ: ಸೋಂಕಿತರ ಅಳಲು
ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿವೆ. ಆದ್ರೂ ಸೋಂಕಿತರ ಚಿಕಿತ್ಸೆ ವಿಚಾರದಲ್ಲಿ ಮಾತ್ರ ದಿವ್ಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಕೆ.ಸಿ.ಜನರಲ್ ಆಸ್ಪತ್ರೆಯ ವಿರುದ್ಧ ಸೋಂಕಿತರು ಆರೋಪ ಮಾಡಿದ್ದಾರೆ. ಕೆ.ಸಿ.ಜನರಲ್ ಹಾಗೂ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ. ಕೊರೊನಾ ಸೋಂಕಿತರಿಗೆ ಮೂಲಭೂತ ವ್ಯವಸ್ಥೆ ಇಲ್ಲ ಎಂದು ಸೋಂಕಿತರು ತಮ್ಮ ಅಳಲು ತೋಡಿಕೊಂಡಿದ್ದಾರೆ. 30-40 ಸೋಂಕಿತರ ಕೊಠಡಿಗೆ ಒಬ್ಬ ಸಹಾಯಕರು ಇದ್ದಾರೆ. ಕೊರೊನಾ ಸೋಂಕಿತರಿಗೆ ಸರಿಯಾಗಿ ಆಕ್ಸಿಜನ್ ನೀಡುತ್ತಿಲ್ಲ. ವೈದ್ಯರು […]

ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿವೆ. ಆದ್ರೂ ಸೋಂಕಿತರ ಚಿಕಿತ್ಸೆ ವಿಚಾರದಲ್ಲಿ ಮಾತ್ರ ದಿವ್ಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಕೆ.ಸಿ.ಜನರಲ್ ಆಸ್ಪತ್ರೆಯ ವಿರುದ್ಧ ಸೋಂಕಿತರು ಆರೋಪ ಮಾಡಿದ್ದಾರೆ.
ಕೆ.ಸಿ.ಜನರಲ್ ಹಾಗೂ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ. ಕೊರೊನಾ ಸೋಂಕಿತರಿಗೆ ಮೂಲಭೂತ ವ್ಯವಸ್ಥೆ ಇಲ್ಲ ಎಂದು ಸೋಂಕಿತರು ತಮ್ಮ ಅಳಲು ತೋಡಿಕೊಂಡಿದ್ದಾರೆ. 30-40 ಸೋಂಕಿತರ ಕೊಠಡಿಗೆ ಒಬ್ಬ ಸಹಾಯಕರು ಇದ್ದಾರೆ. ಕೊರೊನಾ ಸೋಂಕಿತರಿಗೆ ಸರಿಯಾಗಿ ಆಕ್ಸಿಜನ್ ನೀಡುತ್ತಿಲ್ಲ.
ವೈದ್ಯರು ಸೋಂಕಿತರ ಮಧ್ಯೆ ಸಂಬಂಧವೇ ಇಲ್ಲದಂತಾಗಿದೆ. ಸೋಂಕಿತರಿಗೆ ಸರಿಯಾದ ಊಟ ಕೊಡುತ್ತಿಲ್ಲ. ಸರ್ಕಾರಿ ಆಸ್ಪತ್ರೆ ಗತಿಯೇ ಹೀಗಾದ್ರೆ ಹೇಗೆ ಎಂದು ಆಸ್ಪತ್ರೆಗಳ ವಿರುದ್ಧ ಸೋಂಕಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 8:45 am, Tue, 29 September 20
