ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದು ಬೆಂಗಳೂರಿನ ಕೋವಿಡ್ ಆಸ್ಪತ್ರೆಗಳು ಸಹ ಭರ್ತಿಯಾಗತೊಡಗಿವೆ. ಈ ಮಧ್ಯೆ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಆಸ್ಪತ್ರೆಗಳಲ್ಲಿ ಸಮರ್ಪಕವಾದ ಮೂಲಸೌಕರ್ಯಗಳನ್ನು ನೀಡುತ್ತಿಲ್ಲ ಎಂದು ಧರಣಿ ನಡೆಸಿರುವ ಘಟನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ.
‘ಸ್ನಾನಕ್ಕೆ ನೀರಿನ ವ್ಯವಸ್ಥೆ ಇಲ್ಲ, ಊಟ, ತಿಂಡಿ ಸರಿಯಾಗಿ ಕೊಡ್ತಿಲ್ಲ’
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಟ್ರಾಮಾ ಸೆಂಟರ್ ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಕೆಲವು ಸೋಂಕಿತರನ್ನ ಮಾಸ್ಟರ್ ಪ್ಲ್ಯಾನ್ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು.
ಆದರೆ ಈ ಕಟ್ಟಡದಲ್ಲಿ ಸ್ನಾನಕ್ಕೆ ನೀರಿನ ವ್ಯವಸ್ಥೆ ಇಲ್ಲ ಎಂದು ಕಟ್ಟಡದ ಕೋವಿಡ್ ವಾರ್ಡ್ನಿಂದ ಹೊರಗೆ ಬಂದು ಪ್ರತಿಭಟನೆ ನಡೆಸಿದರು. ಜೊತೆಗೆ ಊಟ, ತಿಂಡಿಯನ್ನ ಸರಿಯಾಗಿ ಕೊಡುತ್ತಿಲ್ಲ ಎಂದು ತಮ್ಮ ಅಳಲು ಸಹ ತೋಡಿಕೊಂಡಿದ್ದಾರೆ. ಕೂಡಲೇ ತಮಗೆ ಸಮರ್ಪಕವಾದ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ವಾರ್ಡ್ನ ಉಸ್ತುವಾರಿ ವಹಿಸಿಕೊಂಡಿರುವ ಆಸ್ಪತ್ರೆಯ ವೈದ್ಯೆ ಡಾ. ಸ್ಮಿತಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.