ರಾಜಧಾನಿಯಲ್ಲಿ ಕೊರೊನಾಗೆ ಮತ್ತೊಬ್ಬರು ಬಲಿ
ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. 2519ನೇ ಸೋಂಕಿತರಾಗಿದ್ದ ಅಗ್ರಹಾರ ದಾಸರಹಳ್ಳಿಯ ನಿವಾಸಿ 61 ವರ್ಷದ ವೃದ್ಧೆ ಸಾವಿಗೀಡಾಗಿದ್ದಾರೆ. ವೃದ್ಧೆಗೆ ಮೇ 28ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮತ್ತೊಂದು ಕೊರೊನಾ ಶಂಕಿತೆ ಸಾವು: ಬೆಂಗಳೂರು ನಗರದಲ್ಲಿ ಮತ್ತೊಂದು ಕೊರೊನಾ ಶಂಕಿತೆ ಮೃತಪಟ್ಟಿದ್ದಾರೆ. ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಹಾಲಕ್ಷ್ಮೀ ಲೇಔಟ್‌ನ 85 […]
ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. 2519ನೇ ಸೋಂಕಿತರಾಗಿದ್ದ ಅಗ್ರಹಾರ ದಾಸರಹಳ್ಳಿಯ ನಿವಾಸಿ 61 ವರ್ಷದ ವೃದ್ಧೆ ಸಾವಿಗೀಡಾಗಿದ್ದಾರೆ.
ವೃದ್ಧೆಗೆ ಮೇ 28ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮತ್ತೊಂದು ಕೊರೊನಾ ಶಂಕಿತೆ ಸಾವು: ಬೆಂಗಳೂರು ನಗರದಲ್ಲಿ ಮತ್ತೊಂದು ಕೊರೊನಾ ಶಂಕಿತೆ ಮೃತಪಟ್ಟಿದ್ದಾರೆ. ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಹಾಲಕ್ಷ್ಮೀ ಲೇಔಟ್‌ನ 85 ವರ್ಷದ ವೃದ್ಧೆ ಸಾವಿಗೀಡಾಗಿದ್ದಾರೆ. ಮೃತಪಟ್ಟ ನಂತರ ವೈದ್ಯರು ಕೊರೊನಾ ಟೆಸ್ಟ್ ಮಾಡಿದ್ದರು.
ಆದ್ರೆ ವರದಿ ಬರುವ ಮುನ್ನವೇ ಅಂತ್ಯಸಂಸ್ಕಾರ ಮಾಡಲಾಗಿತ್ತು. ಇದೀಗ ರಿಪೋರ್ಟ್ ಬಂದಿದ್ದು ಕೊರೊನಾ ಸೋಂಕಿನ ಶಂಕೆ ವ್ಯಕ್ತವಾಗಿದೆ. ಹಾಗಾಗಿ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ ಕುಟುಂಬಸ್ಥರಿಗೆ ಆತಂಕ ಶುರುವಾಗಿದೆ.
Published On - 2:08 pm, Sun, 7 June 20