ಚಾಮರಾಜನಗರ: ಈ ಕೊರೊನಾ ಸಂಕಷ್ಟದ ಸಮಯದಲ್ಲಿ ಕೊರೊನಾ ವಾರಿಯರ್ಸ್ಗಳ ಕಾರ್ಯ ಹೇಳತೀರದ್ದು. ತಮ್ಮ ಕಷ್ಟಗಳನ್ನು ಬದಿಗಿಟ್ಟು ಜನರ ಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ. ಆದರೆ ಈಗ ಅದೇ ಕೊರೊನಾ ವಾರಿಯರ್ಸ್ ಕಣ್ಣೀರು ಹಾಕುತ್ತಿದ್ದಾರೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲೂಕು ಆರೋಗ್ಯ ಇಲಾಖೆ ಆತ್ಮಸ್ಥೈರ್ಯ ಕಾರ್ಯಕ್ರಮವನ್ನು ಏರ್ಪಡಿಸಿತ್ತು. ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಸ್ ಗಳಗಳನೆ ಕಣ್ಣೀರು ಸುರಿಸಿದ್ದಾರೆ. ತಾವು ಅನುಭವಿಸುತ್ತಿರುವ ಕಷ್ಟವನ್ನು ಹೇಳಿಕೊಂಡಿದ್ದಾರೆ.
ಕಂಟೇನ್ಮೆಂಟ್ ಜೋನ್ಗಳಿಗೆ ಹೋಗಲು ಭಯವಾಗುತ್ತಿದೆ. ಆ ಏರಿಯಾ ಜನ ಜೀವ ಬೆದರಿಕೆ ಹಾಕ್ತಿದ್ದಾರೆ. ಮಚ್ಚು, ಲಾಂಗು ತೋರಿಸಿ ಬೆದರಿಕೆ ಹಾಕುತ್ತಿದ್ದಾರೆಂದು ಎಂದು ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆ, ನರ್ಸ್ ಅಳಲು ತೋಡಿಕೊಂಡಿದ್ದಾರೆ.