ಬೆಂಗಳೂರು: ಕಿಲ್ಲರ್ ಕೊರೊನಾಗೆ ನಗರದಲ್ಲಿ ಮತ್ತೊಂದು ಬಲಿಯಾಗಿದೆ. ಮೃತರು ಬೆಂಗಳೂರಿನ ರಾಮಸ್ವಾಮಿ ಪಾಳ್ಯದ ನಿವಾಸಿ 66 ವರ್ಷದ ವ್ಯಕ್ತಿ ಎಂದು ತಿಳಿದು ಬಂದಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಈವರೆಗೆ ಮೂವರು ಕೊರೊನಾಗೆ ಬಲಿಯಾಗಿದ್ದು, ಕರ್ನಾಟಕದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ಕೊರೊನಾ ವೈರೆಸ್ನಿಂದ ಮೃತನಾಗಿರುವ ವ್ಯಕ್ತಿ ಮಣಿಪುರದಿಂದ ಬೆಂಗಳೂರಿಗೆ ಬಂದಿದ್ದ. ಮೊದಲು ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ. ಈ ವೇಳೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ನಂತರ 195ನೇ ಕೊರೊನಾ ಸೋಂಕಿತ ವ್ಯಕ್ತಿಯಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾನೆ. ಸೋಂಕಿತನ ಜೊತೆ ಸಂಪರ್ಕ ಹೊಂದಿದ್ದ ಹೆಂಡತಿ, ಮಗ, ಅಳಿಯ, ಆಟೋ ಚಾಲಕನಿಗೆ ತಪಾಸಣೆ ಮಾಡಲಾಗುತ್ತಿದೆ. ಪ್ರಾಥಮಿಕ ಸಂಪರ್ಕ ಹೊಂದಿದ್ದವರಿಗೆ ನೆಗೆಟಿವ್ ಬಂದಿದೆ.
Published On - 11:47 am, Thu, 16 April 20