ಬೀದರ್​ನಲ್ಲಿ ಕೊರೊನಾಗೆ ಮೊದಲ ಬಲಿ, ಖಂಡ್ರೆ ಹೇಳಿದ್ದು ನಿಜವಾಯ್ತಾ!

ಬೀದರ್: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, 590ನೇ ಕೊರೊನಾ ಸೋಂಕಿತ ಬೀದರ್‌ನ 82 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಉಸಿರಾಟ ಸಮಸ್ಯೆಯಿಂದ ಇವರು ಆಸ್ಪತ್ರೆಗೆ ದಾಖಲಾಗಿದ್ದರು. ಅಂದಿನಿಂದ ವೃದ್ಧನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿಗದಿತ ಆಸ್ಪತ್ರೆಯಲ್ಲಿ 82 ವರ್ಷದ ವೃದ್ಧ ಇಂದು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ವೈರಸ್​ನಿಂದ ಮೂವರು ಸಾವಿಗೀಡಾಗಿದ್ದಾರೆ ಎಂದು ಭಾಲ್ಕಿಯಲ್ಲಿ ಕೆಪಿಸಿಸಿ ‌ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಗಂಭೀರ ಆರೋಪ ಮಾಡಿದ್ದರು. ಆದ್ರೆ, ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಇದನ್ನು ಬಹಿರಂಗಪಡಿಸಿಲ್ಲ […]

ಬೀದರ್​ನಲ್ಲಿ ಕೊರೊನಾಗೆ ಮೊದಲ ಬಲಿ, ಖಂಡ್ರೆ ಹೇಳಿದ್ದು ನಿಜವಾಯ್ತಾ!
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​

Updated on: May 02, 2020 | 1:02 PM

ಬೀದರ್: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, 590ನೇ ಕೊರೊನಾ ಸೋಂಕಿತ ಬೀದರ್‌ನ 82 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಉಸಿರಾಟ ಸಮಸ್ಯೆಯಿಂದ ಇವರು ಆಸ್ಪತ್ರೆಗೆ ದಾಖಲಾಗಿದ್ದರು. ಅಂದಿನಿಂದ ವೃದ್ಧನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿಗದಿತ ಆಸ್ಪತ್ರೆಯಲ್ಲಿ 82 ವರ್ಷದ ವೃದ್ಧ ಇಂದು ಸಾವಿಗೀಡಾಗಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ವೈರಸ್​ನಿಂದ ಮೂವರು ಸಾವಿಗೀಡಾಗಿದ್ದಾರೆ ಎಂದು ಭಾಲ್ಕಿಯಲ್ಲಿ ಕೆಪಿಸಿಸಿ ‌ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಗಂಭೀರ ಆರೋಪ ಮಾಡಿದ್ದರು. ಆದ್ರೆ, ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಇದನ್ನು ಬಹಿರಂಗಪಡಿಸಿಲ್ಲ ಎಂದು ಆರೋಪಿಸಿದ್ದಾರೆ. ಇದೀಗ ಬೀದರ್ ಜಿಲ್ಲೆಯಲ್ಲಿ ಕೊರೊನಾಗೆ ಒಬ್ಬ ಬಲಿಯಾಗಿದ್ದಾರೆಂದು ಸರ್ಕಾರ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲೂ ಕೊರೊನಾಗೆ ಮತ್ತೊಬ್ಬರು ಬಲಿ:
ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ದೀಪಾಂಜಲಿ ನಗರದ ನಿವಾಸಿಯಾಗಿರುವ 557ನೇ ಸೋಂಕಿತ 63 ವರ್ಷದ ವೃದ್ಧ ಮೃತಪಟ್ಟಿದ್ದಾರೆ. 465ನೇ ಸೋಂಕಿತರಿಂದ ವೃದ್ಧನಿಗೆ ಕೊರೊನಾ ಸೋಂಕು ತಗುಲಿತ್ತು. 465ನೇ ಸೋಂಕಿತ ಕೂಡ ಕೊರೊನಾದಿಂದ ಸಾವಿಗೀಡಾಗಿದ್ದರು.

Published On - 12:52 pm, Sat, 2 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us