8 ಗಂಟೆಯಿಂದ ಕಾಯುತ್ತಿರುವ ಸೋಂಕಿತ ಪೊಲೀಸರು, ಇನ್ನೂ ಬಾರದ ಆ್ಯಂಬುಲೆನ್ಸ್!
ಮಂಗಳೂರು: ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿರುವ ಸಂದರ್ಭದಲ್ಲಿ ಮಂಗಳೂರಿನ ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದು 8 ಗಂಟೆಯಾದ್ರೂ ಸೋಂಕಿತರನ್ನು ಆಸ್ಪತ್ರೆಗೆ ಸೇರಿಸಿಲ್ಲ. ಇಂದು ಉಳ್ಳಾಲ ಠಾಣೆಯ 6 ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾಗಾಗಿ ಬೆಳಗ್ಗೆಯಿಂದ ಉಳ್ಳಾಲ ಪೊಲೀಸ್ ಠಾಣೆಯ ಎದುರೇ ಸೋಂಕಿತ ಪೊಲೀಸರು ಕಾಯುತ್ತಿದ್ದಾರೆ. ಆದ್ರೆ, ಅಧಿಕಾರಿಗಳು ಮಾತ್ರ ಆ್ಯಂಬುಲೆನ್ಸ್ ಇಲ್ಲ ಎಂದು ಸಬೂಬು ಹೇಳುತ್ತಿದ್ದಾರೆ. ಸದ್ಯ ಉಳ್ಳಾಲ ಠಾಣೆಯ 10 ಮಂದಿ ಪೊಲೀಸರಿಗೆ ಕೊರೊನಾ ವಕ್ಕರಿಸಿದೆ.
ಮಂಗಳೂರು: ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿರುವ ಸಂದರ್ಭದಲ್ಲಿ ಮಂಗಳೂರಿನ ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದು 8 ಗಂಟೆಯಾದ್ರೂ ಸೋಂಕಿತರನ್ನು ಆಸ್ಪತ್ರೆಗೆ ಸೇರಿಸಿಲ್ಲ.
ಇಂದು ಉಳ್ಳಾಲ ಠಾಣೆಯ 6 ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾಗಾಗಿ ಬೆಳಗ್ಗೆಯಿಂದ ಉಳ್ಳಾಲ ಪೊಲೀಸ್ ಠಾಣೆಯ ಎದುರೇ ಸೋಂಕಿತ ಪೊಲೀಸರು ಕಾಯುತ್ತಿದ್ದಾರೆ. ಆದ್ರೆ, ಅಧಿಕಾರಿಗಳು ಮಾತ್ರ ಆ್ಯಂಬುಲೆನ್ಸ್ ಇಲ್ಲ ಎಂದು ಸಬೂಬು ಹೇಳುತ್ತಿದ್ದಾರೆ. ಸದ್ಯ ಉಳ್ಳಾಲ ಠಾಣೆಯ 10 ಮಂದಿ ಪೊಲೀಸರಿಗೆ ಕೊರೊನಾ ವಕ್ಕರಿಸಿದೆ.
Published On - 4:53 pm, Mon, 29 June 20