Covid 19 Karnataka Update: ಕರ್ನಾಟಕದ 1632 ಮಂದಿಯಲ್ಲಿ ಸೋಂಕು, ದಕ್ಷಿಣ ಕನ್ನಡದಲ್ಲೇ ಹೆಚ್ಚು

ಬೆಂಗಳೂರು ನಗರ ಜಿಲ್ಲೆಯಲ್ಲಿ ಶನಿವಾರ ಒಟ್ಟು 377 ಮಂದಿಯಲ್ಲಿ ಕೊವಿಡ್ ಸೋಂಕು ದೃಢಪಟ್ಟಿದೆ. ಒಬ್ಬರು ನಿಧನರಾಗಿದ್ದಾರೆ.

Covid 19 Karnataka Update: ಕರ್ನಾಟಕದ 1632 ಮಂದಿಯಲ್ಲಿ ಸೋಂಕು, ದಕ್ಷಿಣ ಕನ್ನಡದಲ್ಲೇ ಹೆಚ್ಚು
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Aug 14, 2021 | 9:22 PM

ಬೆಂಗಳೂರು: ಕರ್ನಾಟಕದಲ್ಲಿ ಶನಿವಾರ ಒಟ್ಟು 1632 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 25 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 1612 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಅಗಿದ್ದಾರೆ. ಡಿಸ್​ಚಾರ್ಜ್ ಆಗಿರುವವರ ಸಂಖ್ಯೆಗಿಂತಲೂ ಸೋಂಕಿತರ ಸಂಖ್ಯೆಯೇ ಹೆಚ್ಚಾಗಿರುವುದು ಈಚಿನ ದಿನಗಳಲ್ಲಿ ಗಮನಾರ್ಹ ಬೆಳವಣಿಗೆ ಎನಿಸಿದೆ.

ಕರ್ನಾಟಕದಲ್ಲಿ ಈವರೆಗೆ 29,28,033 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 28,68,351 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಒಟ್ಟು 22,698 ಸಕ್ರಿಯ ಪ್ರಕರಣಗಳಿವೆ. ಈವರೆಗೆ 36,958 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದ ಪಾಸಿಟಿವಿಟಿ ಸರಾಸರಿಯು ಶೇ 1.04 ಇದ್ದರೆ, ಕೊವಿಡ್ ಸೋಂಕಿತರ ಸಾವಿನ ಸರಾಸರಿ ಶೇ 1.53 ಇದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಶನಿವಾರ ಒಟ್ಟು 377 ಮಂದಿಯಲ್ಲಿ ಕೊವಿಡ್ ಸೋಂಕು ದೃಢಪಟ್ಟಿದೆ. ಒಬ್ಬರು ನಿಧನರಾಗಿದ್ದಾರೆ. ಈವರೆಗೆ ಬೆಂಗಳೂರಿನಲ್ಲಿ ಒಟ್ಟು 12,32,597 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,08,462 ಮಂದಿ ಚೇತರಿಸಿಕೊಂಡಿದ್ದಾರೆ. 8200 ಸಕ್ರಿಯ ಪ್ರಕರಣಗಳಿವೆ. ಒಟ್ಟು 15,934 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಇಂದೂ ಸಹ ದಕ್ಷಿಣ ಜಿಲ್ಲೆಯಲ್ಲಿಯೇ ಅತಿಹೆಚ್ಚು ಮಂದಿಗೆ 411 ಜನರಲ್ಲಿ ಸೋಂಕು ದೃಢಪಟ್ಟಿದೆ. ನಂತರದ ಸ್ಥಾನದಲ್ಲಿ ಬೆಂಗಳೂರು ನಗರ (377) ಇದೆ. ಉಳಿದಂತೆ ಉಡುಪಿ 169, ಮೈಸೂರು 112, ಹಾಸನ 97, ಬೆಳಗಾವಿ 41, ಬೆಂಗಳೂರು ಗ್ರಾಮಾಂತರ 14, ಚಾಮರಾಜನಗರ 17, ಚಿಕ್ಕಬಳ್ಳಾಪುರ 8, ಚಿಕ್ಕಮಗಳೂರು 53, ಚಿತ್ರದುರ್ಗ 22, ದಾವಣಗೆರೆ 5, ರಾಯಚೂರು, ಹಾವೇರಿ 1, ಕೊಪ್ಪಳ, ಧಾರವಾಡ, ಕಲಬುರಗಿ 3, ಕೊಡಗು 77, ಕೋಲಾರ 18, ರಾಮನಗರ,, ಮಂಡ್ಯ 39, ಶಿವಮೊಗ್ಗ 60, ತುಮಕೂರು 43, ಉತ್ತರ ಕನ್ನಡ 49, ಬಾಗಲಕೋಟೆ, ವಿಜಯಪುರ ಮತ್ತು ಬಳ್ಳಾರಿ ತಲಾ 2

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ರಾಜ್ಯದಲ್ಲಿ ಒಟ್ಟು 25 ಮಂದಿ ಕೊವಿಡ್​ನಿಂದ ಮೃತಪಟ್ಟಿದ್ದಾರೆ. ಈ ಪೈಕಿ ದಕ್ಷಿಣ ಕನ್ನಡ 7, ಚಿತ್ರದುರ್ಗ, ಕೊಡಗು 3, ಮಂಡ್ಯ 2, ಬೆಂಗಳೂರು ನಗರ, ಚಾಮರಾಜನಗರ, ಧಾರವಾಡ, ಮೈಸೂರು, ಉಡುಪಿ ಮತ್ತು ಉತ್ತರ ಕನ್ನಡ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

(Coronavirus Karnataka Numbers 1632 Infected Dakshina Kannada Highest)

ಇದನ್ನೂ ಓದಿ: CM Bommai Press Meet: ಜಿಲ್ಲಾವಾರು ಕೊವಿಡ್ ತಡೆ ಯೋಜನೆ, ಗಡಿ ಜಿಲ್ಲೆಗಳ ಹಳ್ಳಿಗಳಲ್ಲಿ ಟೆಸ್ಟಿಂಗ್, 6 ಜಿನೋಮ್ ಟೆಸ್ಟಿಂಗ್ ಲ್ಯಾಬ್ ಸ್ಥಾಪನೆ: ಸಿಎಂ ಬೊಮ್ಮಾಯಿ

ಇದನ್ನೂ ಓದಿ: ಮೂರನೇ ಡೋಸ್​ ಕೊರೊನಾ ಲಸಿಕೆ ನೀಡುವುದಕ್ಕೆ ಒಪ್ಪಿಗೆ ಸೂಚಿಸಿದ ಸಿಡಿಸಿ; ಆದ್ಯತೆ ಮೇರೆಗೆ ವಿತರಿಸಲು ಸೂಚನೆ

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ