ಬೆಂಗಳೂರು: ಕರ್ನಾಟಕದಲ್ಲಿ ಶನಿವಾರ ಒಟ್ಟು 1632 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 25 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 1612 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಅಗಿದ್ದಾರೆ. ಡಿಸ್ಚಾರ್ಜ್ ಆಗಿರುವವರ ಸಂಖ್ಯೆಗಿಂತಲೂ ಸೋಂಕಿತರ ಸಂಖ್ಯೆಯೇ ಹೆಚ್ಚಾಗಿರುವುದು ಈಚಿನ ದಿನಗಳಲ್ಲಿ ಗಮನಾರ್ಹ ಬೆಳವಣಿಗೆ ಎನಿಸಿದೆ.
ಕರ್ನಾಟಕದಲ್ಲಿ ಈವರೆಗೆ 29,28,033 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 28,68,351 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಒಟ್ಟು 22,698 ಸಕ್ರಿಯ ಪ್ರಕರಣಗಳಿವೆ. ಈವರೆಗೆ 36,958 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದ ಪಾಸಿಟಿವಿಟಿ ಸರಾಸರಿಯು ಶೇ 1.04 ಇದ್ದರೆ, ಕೊವಿಡ್ ಸೋಂಕಿತರ ಸಾವಿನ ಸರಾಸರಿ ಶೇ 1.53 ಇದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಶನಿವಾರ ಒಟ್ಟು 377 ಮಂದಿಯಲ್ಲಿ ಕೊವಿಡ್ ಸೋಂಕು ದೃಢಪಟ್ಟಿದೆ. ಒಬ್ಬರು ನಿಧನರಾಗಿದ್ದಾರೆ. ಈವರೆಗೆ ಬೆಂಗಳೂರಿನಲ್ಲಿ ಒಟ್ಟು 12,32,597 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,08,462 ಮಂದಿ ಚೇತರಿಸಿಕೊಂಡಿದ್ದಾರೆ. 8200 ಸಕ್ರಿಯ ಪ್ರಕರಣಗಳಿವೆ. ಒಟ್ಟು 15,934 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು?
ಇಂದೂ ಸಹ ದಕ್ಷಿಣ ಜಿಲ್ಲೆಯಲ್ಲಿಯೇ ಅತಿಹೆಚ್ಚು ಮಂದಿಗೆ 411 ಜನರಲ್ಲಿ ಸೋಂಕು ದೃಢಪಟ್ಟಿದೆ. ನಂತರದ ಸ್ಥಾನದಲ್ಲಿ ಬೆಂಗಳೂರು ನಗರ (377) ಇದೆ. ಉಳಿದಂತೆ ಉಡುಪಿ 169, ಮೈಸೂರು 112, ಹಾಸನ 97, ಬೆಳಗಾವಿ 41, ಬೆಂಗಳೂರು ಗ್ರಾಮಾಂತರ 14, ಚಾಮರಾಜನಗರ 17, ಚಿಕ್ಕಬಳ್ಳಾಪುರ 8, ಚಿಕ್ಕಮಗಳೂರು 53, ಚಿತ್ರದುರ್ಗ 22, ದಾವಣಗೆರೆ 5, ರಾಯಚೂರು, ಹಾವೇರಿ 1, ಕೊಪ್ಪಳ, ಧಾರವಾಡ, ಕಲಬುರಗಿ 3, ಕೊಡಗು 77, ಕೋಲಾರ 18, ರಾಮನಗರ,, ಮಂಡ್ಯ 39, ಶಿವಮೊಗ್ಗ 60, ತುಮಕೂರು 43, ಉತ್ತರ ಕನ್ನಡ 49, ಬಾಗಲಕೋಟೆ, ವಿಜಯಪುರ ಮತ್ತು ಬಳ್ಳಾರಿ ತಲಾ 2
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು?
ರಾಜ್ಯದಲ್ಲಿ ಒಟ್ಟು 25 ಮಂದಿ ಕೊವಿಡ್ನಿಂದ ಮೃತಪಟ್ಟಿದ್ದಾರೆ. ಈ ಪೈಕಿ ದಕ್ಷಿಣ ಕನ್ನಡ 7, ಚಿತ್ರದುರ್ಗ, ಕೊಡಗು 3, ಮಂಡ್ಯ 2, ಬೆಂಗಳೂರು ನಗರ, ಚಾಮರಾಜನಗರ, ಧಾರವಾಡ, ಮೈಸೂರು, ಉಡುಪಿ ಮತ್ತು ಉತ್ತರ ಕನ್ನಡ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ಇಂದಿನ 14/08/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/L5dmnddqUp @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/EmOEwPcq4D
— K’taka Health Dept (@DHFWKA) August 14, 2021
(Coronavirus Karnataka Numbers 1632 Infected Dakshina Kannada Highest)
ಇದನ್ನೂ ಓದಿ: ಮೂರನೇ ಡೋಸ್ ಕೊರೊನಾ ಲಸಿಕೆ ನೀಡುವುದಕ್ಕೆ ಒಪ್ಪಿಗೆ ಸೂಚಿಸಿದ ಸಿಡಿಸಿ; ಆದ್ಯತೆ ಮೇರೆಗೆ ವಿತರಿಸಲು ಸೂಚನೆ