Covid-19 Karnataka Update: ಕರ್ನಾಟಕದಲ್ಲಿ ಇಂದು 31,830 ಮಂದಿಗೆ ಕೊರೊನಾ ಸೋಂಕು, 180 ಸಾವು

Coronavirus: ಬೆಂಗಳೂರಿನಲ್ಲಿ ಒಂದೇ ದಿನ 17,550 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 97 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Covid-19 Karnataka Update: ಕರ್ನಾಟಕದಲ್ಲಿ ಇಂದು 31,830 ಮಂದಿಗೆ ಕೊರೊನಾ ಸೋಂಕು, 180 ಸಾವು
ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
| Updated By: Digi Tech Desk

Updated on:Apr 27, 2021 | 10:44 PM

ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರ (ಏಪ್ರಿಲ್ 27) ಒಟ್ಟು 31,830 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟು 180 ಜನರು ಕೋವಿಡ್-19ರಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಂದೇ ದಿನ 17,550 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 97 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು ಹೊಸದಾಗಿ 31,830 ಜನರಿಗೆ ಕೊರೊನಾ ದೃಢಪಡುವುದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 14,00,775ಕ್ಕೆ (14 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 180 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಸಾವನ್ನಪ್ಪಿದ್ದವರ ಸಂಖ್ಯೆ 14,807ಕ್ಕೆ ಮುಟ್ಟಿದೆ. ಸೋಂಕಿತರ ಪೈಕಿ 10,84,050 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 3,01,899 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಇಂದು 17,550 ಜನರಲ್ಲಿ ಸೋಂಕು ದೃಢಪಟ್ಟಿದ್ದು, 97 ಜನರು ಬಲಿಯಾಗಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 6,002ಕ್ಕೆ ಮುಟ್ಟಿದೆ. ಸೋಂಕಿತರ ಒಟ್ಟು ಸಂಖ್ಯೆ 6,87,751 ಮುಟ್ಟಿದೆ. ಈ ಪೈಕಿ 4,75,525 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,06,223 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 180. ಈ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ, 97 ಜನರು ಸಾವನ್ನಪ್ಪಿದ್ದಾರೆ. ಬಳ್ಳಾರಿ 18, ಮೈಸೂರು 9, ಕಲಬುರಗಿ 7, ರಾಮನಗರ 6, ಹಾಸನ, ಧಾರವಾಡ, ಬೀದರ್​ ಜಿಲ್ಲೆಯಲ್ಲಿ ತಲಾ ಐವರು, ವಿಜಯಪುರ 4, ತುಮಕೂರು, ಹಾವೇರಿ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಲಾ ಮೂವರು ಮೃತಪಟ್ಟಿದ್ದಾರೆ. ಶಿವಮೊಗ್ಗ, ಕೋಲಾರ, ಚಾಮರಾಜನಗರ ಜಿಲ್ಲೆಗಳಲ್ಲಿ ತಲಾ ಇಬ್ಬರು ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ, ರಾಯಚೂರು, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ರಾಜ್ಯದಲ್ಲಿಂದು ಹೊಸದಾಗಿ 31,830 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು ಮಂದಿಗೆ 17,550 ಸೋಂಕು ದೃಢಪಟ್ಟಿದೆ. ಮೈಸೂರು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2 ಸಾವಿರ ದಾಟಿದೆ. ಅಲ್ಲಿ ಇಂದು 2,042 ಜನರಲ್ಲಿ ಸೋಂಕು ದೃಢಪಟ್ಟಿದೆ. ತುಮಕೂರು ಜಿಲ್ಲೆಯಲ್ಲಿಯೂ ಸತತವಾಗಿ ಸೋಂಕಿತರ ಸಂಖ್ಯೆ ಒಂದು ಸಾವಿರ ದಾಟುತ್ತಿದೆ. ತುಮಕೂರಿನಲ್ಲಿ ಇಂದು 1,196 ಜನರಲ್ಲಿ ಸೋಂಕು ದೃಢಪಟ್ಟಿದೆ.

ಬಳ್ಳಾರಿ 907, ಕಲಬುರಗಿ 772, ಮಂಡ್ಯ 737, ರಾಯಚೂರು 736, ಬೆಂಗಳೂರು ಗ್ರಾಮಾಂತರ 599, ಕೋಲಾರ 548, ಚಿಕ್ಕಬಳ್ಳಾಪುರ 544, ವಿಜಯಪುರ 531, ಹಾಸನ 503, ಉಡುಪಿ 477, ಯಾದಗಿರಿ 414, ದಕ್ಷಿಣ ಕನ್ನಡ 486, ಧಾರವಾಡ 423, ಕೊಪ್ಪಳ 382, ಕೊಡಗು 373, ಬೀದರ್ 328, ದಾವಣಗೆರೆ 300, ಬಾಗಲಕೋಟೆ 283, ಚಿಕ್ಕಮಗಳೂರು 275, ಶಿವಮೊಗ್ಗ 256, ಬೆಳಗಾವಿ 219, ಚಾಮರಾಜನಗರ 212, ಉತ್ತರ ಕನ್ನಡ 205, ರಾಮನಗರ 169, ಚಿತ್ರದುರ್ಗ 145, ಗದಗ 119, ಹಾವೇರಿ 99 ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

(Coronavirus Karnataka Update 31830 infected 180 died of covid 19 on April 27)

ಇದನ್ನೂ ಓದಿ: ಕೊವಿಡ್​ ಸೋಂಕು ಹಳ್ಳಿ ಪ್ರವೇಶಿಸದಂತೆ ಗಡಿಯಲ್ಲೇ ಕಾವಲು ಕಾಯುತ್ತಿರುವ ಮಹಿಳೆಯರು; ಶ್ರಮಕ್ಕೆ ಸಿಕ್ಕಿದೆ ಸಾರ್ಥಕತೆ

ಇದನ್ನೂ ಓದಿ: ರಾತ್ರಿ 9ರ ನಂತರ ಮೆಜೆಸ್ಟಿಕ್​ನಿಂದ ಕೆಎಸ್​ಆರ್​ಟಿಸಿ ಬಸ್ ಸಂಚಾರ ಬಂದ್

Published On - 7:48 pm, Tue, 27 April 21

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ