
ದೆಹಲಿ: ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ದೇಶಾದ್ಯಂತ ಮೇ 31ರವರೆಗೂ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಮುಂದಿನ ಎರಡು ವಾರಗಳ ಕಾಲ ಲಾಕ್ಡೌನ್ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ನೀಡಿದೆ.
ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ 4ನೇ ಹಂತದ ಲಾಕ್ಡೌನ್ ವಿಸ್ತರಿಸಲಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಲಾಕ್ಡೌನ್ 4.O ಹೊಸ ಆದೇಶ ಜಾರಿಗೆ ಬರಲಿದೆ.
Published On - 4:49 pm, Sun, 17 May 20