ಕೊರೊನಾ ಪೇಷಂಟ್ ಡಿಸ್ಚಾರ್ಜ್! ವಿಕ್ಟೋರಿಯಾ ಆಸ್ಪತ್ರೆ ಮಹಾ ಎಡವಟ್ಟು..
ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಲೇ ಇದೆ. ಕೊರೊನಾ ಪಾಸಿಟಿವ್ ಬಂದ ಹಲವರಲ್ಲಿ ಸೋಂಕಿನ ಮೂಲವೇ ಪತ್ತೆಯಾಗುತ್ತಿಲ್ಲ. ಇಂಥ ಸಂದರ್ಭದಲ್ಲಿ ನಗರದ ವಿಕ್ಟೋರಿಯಾ ಆಸ್ಪತ್ರೆ ಒಂದು ಮಹಾ ಎಡವಟ್ಟು ಮಾಡಿಬಿಟ್ಟಿದೆ. ರಿಪೋರ್ಟ್ ಅದಲು ಬದಲು, ಪಾಸಿಟಿವ್ ಪೇಷಂಟ್ ಡಿಸ್ಚಾರ್ಜ್! ಜೂನ್ 11ರಂದು ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಮೊದಲನೇ ಸೋಂಕಿತನಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಆತನ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದ್ದರು. ಈ ಮಧ್ಯೆ ಮೂರು ದಿನಗಳ ಹಿಂದೆ […]

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಲೇ ಇದೆ. ಕೊರೊನಾ ಪಾಸಿಟಿವ್ ಬಂದ ಹಲವರಲ್ಲಿ ಸೋಂಕಿನ ಮೂಲವೇ ಪತ್ತೆಯಾಗುತ್ತಿಲ್ಲ. ಇಂಥ ಸಂದರ್ಭದಲ್ಲಿ ನಗರದ ವಿಕ್ಟೋರಿಯಾ ಆಸ್ಪತ್ರೆ ಒಂದು ಮಹಾ ಎಡವಟ್ಟು ಮಾಡಿಬಿಟ್ಟಿದೆ.
ರಿಪೋರ್ಟ್ ಅದಲು ಬದಲು, ಪಾಸಿಟಿವ್ ಪೇಷಂಟ್ ಡಿಸ್ಚಾರ್ಜ್! ಜೂನ್ 11ರಂದು ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಮೊದಲನೇ ಸೋಂಕಿತನಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಆತನ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದ್ದರು. ಈ ಮಧ್ಯೆ ಮೂರು ದಿನಗಳ ಹಿಂದೆ ಮತ್ತೊಬ್ಬ ಸೋಂಕಿತನು ಸಹ ಆಸ್ಪತ್ರೆಗೆ ದಾಖಲಾಗಿದ್ದ. ಹಾಗಾಗಿ ಎರಡೂ ಪೇಷಂಟ್ಗಳ ಗಂಟಲು ದ್ರವವನ್ನ ಟೆಸ್ಟ್ಗೆ ಕಳುಹಿಸಲಾಗಿತ್ತು.
ಆದರೆ, ಲ್ಯಾಬ್ನಲ್ಲಿ ರಿಪೋರ್ಟ್ಗಳೆರಡು ಅದಲುಬದಲಾಗಿ ಎರಡನೇ ಸೋಂಕಿತನಿಗೆ ಕೊರೊನಾ ಪಾಸಿಟಿವ್ ಬಂದಿದ್ರೂ ಆತನಿಗೆ ನೆಗಟಿವ್ ಬಂದಿದೆ ಎಂದು ಹೇಳಿ ಡಿಸ್ಚಾರ್ಜ್ ಮಾಡಲಾಗಿದೆ. ಡಿಸ್ಚಾರ್ಜ್ ಆಗಿದ್ದ ಸೋಂಕಿತ ವ್ಯಕ್ತಿ ಆಸ್ಪತ್ರೆಯಿಂದ ಹೊರಬಂದ ನಂತರ ಸಾಕಷ್ಟು ಜನರನ್ನು ಭೇಟಿ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ಮಹಾ ಎಡವಟ್ಟಿನಿಂದ ಮತ್ತಷ್ಟು ಜನರಿಗೆ ಸೋಂಕು ಹರಡಿರುವ ಭೀತಿ ಎದುರಾಗಿದೆ.
Published On - 5:05 pm, Thu, 25 June 20



