AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶ: ಅಧಿಕಾರಿಗಳನ್ನು ಕಚೇರಿಯಲ್ಲಿ ಕೂಡಿ ಹಾಕಿ ರೈತರ ಪ್ರತಿಭಟನೆ

ತಾರಿಹಾಳ ಹತ್ತಿ ಬೆಂಬಲ ಬೆಲೆ ಖರೀದಿ ಕೇಂದ್ರದಲ್ಲಿ ಘಟನೆ ನಡೆದಿದೆ. ಸಂಜೆ ಏಕಾಏಕಿ ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶಗೊಂಡು ರೈತರು ಕಚೇರಿಯನ್ನು ಲಾಕ್ ಮಾಡಿದ್ದಾರೆ.

ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶ: ಅಧಿಕಾರಿಗಳನ್ನು ಕಚೇರಿಯಲ್ಲಿ ಕೂಡಿ ಹಾಕಿ ರೈತರ ಪ್ರತಿಭಟನೆ
ಪ್ರತಿಭಟನಾ ನಿರತ ರೈತರು
ರಾಜೇಶ್ ದುಗ್ಗುಮನೆ
| Edited By: |

Updated on: Dec 16, 2020 | 10:01 PM

Share

ಹುಬ್ಬಳ್ಳಿ: ಏಕಾಏಕಿ ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶಗೊಂಡ ಹುಬ್ಬಳ್ಳಿ ರೈತರು ಧರಣಿ ನಡೆಸಿದ್ದಾರೆ. ಅಧಿಕಾರಿಗಳನ್ನು ಕಚೇರಿಯಲ್ಲಿ ಕೂಡಿ ಹಾಕಿ ರೈತರು ಪ್ರತಿಭಟನೆ ಮಾಡಿದ್ದಾರೆ.

ತಾರಿಹಾಳ ಹತ್ತಿ ಬೆಂಬಲ ಬೆಲೆ ಖರೀದಿ ಕೇಂದ್ರದಲ್ಲಿ ಘಟನೆ ನಡೆದಿದೆ. ಸಂಜೆ ಏಕಾಏಕಿ ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶಗೊಂಡು ರೈತರು ಕಚೇರಿಯನ್ನು ಲಾಕ್ ಮಾಡಿದ್ದಾರೆ. ಕಚೇರಿ ಒಳಗೆ ಎಪಿಎಂಸಿ ಅಧಿಕಾರಿಗಳಾದ ಪ್ರದೀಪ್, ಪ್ರಕಾಶ್​ಗೆ ದಿಗ್ಬಂಧನ ಹಾಕಿದ್ದಾರೆ.

ಕಳೆದ 3 ಗಂಟೆಯಿಂದ ಕೂಡಿ ಹಾಕಿ ರೈತರು ಪ್ರಭಟನೆ ನಡೆಸುತ್ತಿದ್ದಾರೆ. ಸುಮಾರು 50ಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಹತ್ತಿ ಖರೀದಿ ಕೇಂದ್ರದ ಬಳಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದರೂ ಫೋಲಿಸರು ಸ್ಥಳಕ್ಕೆ ಬರುತ್ತಿಲ್ಲ.

ಇನ್ನು, ಪೊಲೀಸರು ಬಂದರೂ ಯಾರೊಬ್ಬರೂ ಕಚೇರಿ ಒಳಗೆ ಹೋಗದಂತೆ ನೋಡಿಕೊಳ್ಳಲು ಹತ್ತಿ ತುಂಬಿದ ಟ್ರಾಕ್ಟರ್​​ಗಳನ್ನು ಅಧಿಕಾರಿಗಳನ್ನು ಕೂಡಿ ಹಾಕಿದ ಕಚೇರಿಗೆ ಅಡ್ಡಲಾಗಿ ನಿಲ್ಲಿಸಲಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಪಂಜಾಬ್​ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ಈಗ ಹುಬ್ಬಳ್ಳಿ ರೈತರು ಇದೇ ಮಾರ್ಗ ಅನುಸರಿಸಿದ್ದು, ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸಿದ್ದಾರೆ.

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಿಚಿತರಿಂದ ಹಲ್ಲೆ: 4 ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More