ಕೊಲೆಯಾದ ಸ್ಥಿತಿಯಲ್ಲಿ ದಂಪತಿ ಶವಪತ್ತೆ: ಹಳೇ ವೈಷಮ್ಯದ ಶಂಕೆ, ಯಾವೂರಲ್ಲಿ?
ವಿಜಯಪುರ: ಕೊಲೆಯಾದ ಸ್ಥಿತಿಯಲ್ಲಿ ಕೂಲಿ ಕಾರ್ಮಿಕ ದಂಪತಿ ಶವ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಮುದ್ನಾಳ ಗ್ರಾಮದಲ್ಲಿ ನೆಡೆದಿದೆ. ಶಾಂತಿಲಾಲ್ ರಾಠೋಡ (50) ಹಾಗೂ ಆತನ ಪತ್ನಿ ರುಕ್ಮಿಣಿ ರಾಠೋಡ(45) ಕೊಲೆಯಾದ ದಂಪತಿಗಳಾಗಿದ್ದು, ಅಪರಿಚಿತರಿಂದ ಈ ದುಷ್ಕೃತ್ಯ ನಡೆದಿದೆ. ಎರಡು ದಿನಗಳ ಹಿಂದೆ ನಡೆದ ಘಟನೆ ಇಂದು ತಡವಾಗಿ ಬೆಳಕಿಗೆ ಬಂದಿದೆ. ಕೊಲೆಗೀಡಾದ ದಂಪತಿ ಮೂಲತಃ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಬಸರಿಗಿಡದ ತಾಂಡಾದ ನಿವಾಸಿಗಳಾಗಿದ್ದಾರೆ. ಮುದ್ನಾಳ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಜಮೀನಿನಲ್ಲಿ ಕಳೆದ […]

ವಿಜಯಪುರ: ಕೊಲೆಯಾದ ಸ್ಥಿತಿಯಲ್ಲಿ ಕೂಲಿ ಕಾರ್ಮಿಕ ದಂಪತಿ ಶವ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಮುದ್ನಾಳ ಗ್ರಾಮದಲ್ಲಿ ನೆಡೆದಿದೆ.
ಶಾಂತಿಲಾಲ್ ರಾಠೋಡ (50) ಹಾಗೂ ಆತನ ಪತ್ನಿ ರುಕ್ಮಿಣಿ ರಾಠೋಡ(45) ಕೊಲೆಯಾದ ದಂಪತಿಗಳಾಗಿದ್ದು, ಅಪರಿಚಿತರಿಂದ ಈ ದುಷ್ಕೃತ್ಯ ನಡೆದಿದೆ. ಎರಡು ದಿನಗಳ ಹಿಂದೆ ನಡೆದ ಘಟನೆ ಇಂದು ತಡವಾಗಿ ಬೆಳಕಿಗೆ ಬಂದಿದೆ. ಕೊಲೆಗೀಡಾದ ದಂಪತಿ ಮೂಲತಃ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಬಸರಿಗಿಡದ ತಾಂಡಾದ ನಿವಾಸಿಗಳಾಗಿದ್ದಾರೆ.
ಮುದ್ನಾಳ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಜಮೀನಿನಲ್ಲಿ ಕಳೆದ ಒಂದು ವರ್ಷದಿಂದ ಕೂಲಿ ಕಾರ್ಮಿಕರೆಂದು ಕೆಲಸಕ್ಕಿದ್ದರು. ಹರಿತವಾದ ಮಾರಕಾಸ್ತ್ರಗಳಿಂದ ದಂಪತಿಗಳನ್ನು ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲಾವಾದರೂ ಹಳೆಯ ವೈಷಮ್ಯದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಅನುಪಮ ಅಗ್ರವಾಲ್ ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ.
ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಂಪತಿಗಳ ಶವಗಳನ್ನು ರವಾನೆ ಮಾಡಿದ್ದಾರೆ.




