ಮಕ್ಕಳಿಲ್ಲದ ಕಾರಣಕ್ಕೆ ಕಲಹ: ವಿಷ ಸೇವಿಸಿ ಪತ್ನಿ ಸಾವು, ಪತಿ ನೇಣಿಗೆ ಶರಣು, ಯಾವೂರಲ್ಲಿ?
ಬಳ್ಳಾರಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಯೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಸಿಂಗ್ರಿಹಳ್ಳಿಯಲ್ಲಿ ನಡೆದಿದೆ. ಸಾವನ್ನಪ್ಪಿದ ದಂಪತಿಯನ್ನು ಹನಮಂತಪ್ಪ (40) ಮತ್ತು ಸುಧಾ (30) ಎಂದು ಗುರುತಿಸಲಾಗಿದೆ. ದಂಪತಿ ಮಧ್ಯೆ ನಿನ್ನೆ ರಾತ್ರಿ ಜಗಳವಾಗಿತ್ತು ಎಂದು ಹೇಳಲಾಗಿದೆ. ಮದುವೆಯಾಗಿ 6 ವರ್ಷಗಳಾದ್ರು ದಂಪತಿಗೆ ಮಕ್ಕಳಿರಲಿಲ್ಲ ಎಂಬ ಕಾರಣಕ್ಕೆ ಇಬ್ಬರ ನಡುವೆ ಜಗಳವಾಗಿದೆಯಂತೆ. ಕೊನೆಗೆ, ಜಗಳದಿಂದ ಮನನೊಂದ ಸುಧಾ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ. ಇನ್ನು ಪತ್ನಿ ಸಾವಿನ ಸುದ್ದಿ ತಿಳಿದ ಪತಿ ಹನಮಂತಪ್ಪ ನೇಣಿಗೆ ಶರಣಾಗಿದ್ದಾನೆ. […]
ಬಳ್ಳಾರಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಯೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಸಿಂಗ್ರಿಹಳ್ಳಿಯಲ್ಲಿ ನಡೆದಿದೆ. ಸಾವನ್ನಪ್ಪಿದ ದಂಪತಿಯನ್ನು ಹನಮಂತಪ್ಪ (40) ಮತ್ತು ಸುಧಾ (30) ಎಂದು ಗುರುತಿಸಲಾಗಿದೆ.
ದಂಪತಿ ಮಧ್ಯೆ ನಿನ್ನೆ ರಾತ್ರಿ ಜಗಳವಾಗಿತ್ತು ಎಂದು ಹೇಳಲಾಗಿದೆ. ಮದುವೆಯಾಗಿ 6 ವರ್ಷಗಳಾದ್ರು ದಂಪತಿಗೆ ಮಕ್ಕಳಿರಲಿಲ್ಲ ಎಂಬ ಕಾರಣಕ್ಕೆ ಇಬ್ಬರ ನಡುವೆ ಜಗಳವಾಗಿದೆಯಂತೆ. ಕೊನೆಗೆ, ಜಗಳದಿಂದ ಮನನೊಂದ ಸುಧಾ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ. ಇನ್ನು ಪತ್ನಿ ಸಾವಿನ ಸುದ್ದಿ ತಿಳಿದ ಪತಿ ಹನಮಂತಪ್ಪ ನೇಣಿಗೆ ಶರಣಾಗಿದ್ದಾನೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಹಲವಾಗಲು ಪೊಲೀಸರ ಭೇಟಿನೀಡಿ ಪರಿಶೀಲನೆ ನಡೆಸಿದರು.