ಕೊವಿಡ್-19: ರಾಜ್ಯದಲ್ಲಿಂದು 12 ಸಾವು ಮತ್ತು 1,526 ಹೊಸ ಸೋಂಕಿತರು
ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪುತ್ತಿರುವ ಜನರ ಮತ್ತು ಸೋಂಕಿತರ ಸಂಖ್ಯೆ ಕ್ರಮೇಣ ಕಮ್ಮಿಯಾಗುತ್ತಿದೆ. ಇಂದು 12 ಸಾವು ಸಂಭವಿಸಿವೆ ಮತ್ತು ಹೊಸದಾಗಿ 1,526 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಶುಕ್ರವಾರ ಸಾಯಂಕಾಲ ಲಭ್ಯವಾಗಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 12 ಜನರ ಸಾವನ್ನಪ್ಪಿದ್ದಾರೆ ಮತ್ತು ಹೊಸದಾಗಿ 1,526 ಜನರಲ್ಲಿ ಸೋಂಕು ದೃಢಪಟ್ಟಿದೆ
ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 11,738 ಜನ ಮರಣಿಸಿದ್ದು ಸೋಂಕಿತರ ಸಂಖ್ಯೆ 8,81,086ಕ್ಕೇರಿದೆ. ಸೋಂಕಿತರ ಪೈಕಿ 8,43,950 ಜನ ಗುಣಮುಖರಾಗಿದ್ದಾರೆ, ಉಳಿದ 25,379 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾಗೆಯೇ, ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 6 ಜನರ ಬಲಿಯಾಗಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ 808 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ನಗರದಲ್ಲಿ ಕೊರೊನಾದಿಂದ ಈವರೆಗೆ 4,114 ಜನ ಸತ್ತಿದ್ದಾರೆ, ಪೀಡಿತರ ಸಂಖ್ಯೆ 3,67,885 ತಲುಪಿದೆ.
ಸೋಂಕಿತರ ಪೈಕಿ 3,44,687 ಜನ ಗುಣಮುಖರಾಗಿದ್ದಾರೆ, ಮಿಕ್ಕಿದ 19,083 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆಯೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದೊರೆತಿರುವ ಮಾಹಿತಿ ತಿಳಿಸುತ್ತದೆ.




