ಕೊವಿಡ್-19: ರಾಜ್ಯದಲ್ಲಿಂದು 17 ಸಾವು ಮತ್ತು 1,781 ಹೊಸ ಪ್ರಕರಣಗಳು | Covid-19: 17 deaths and 1,781 new cases in Karnataka today

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಶುಕ್ರವಾರ ಸಾಯಂಕಾಲ ಸಿಕ್ಕಿರುವ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 17 ಜನ ಸತ್ತಿದ್ದಾರೆ ಮತ್ತು ಹೊಸದಾಗಿ 1,781 ಜನರಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ 11,621 ಜನ ಮರಣಿಸಿದ್ದಾರೆ ಮತ್ತು ಸೋಂಕಿತರ ಸಂಖ್ಯೆ 8,69,561ಕ್ಕೇರಿದೆ. ಸೋಂಕಿತರ ಪೈಕಿ 8,33,169 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಮತ್ತು ಮಿಕ್ಕಿದ 24,752 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೆಯೇ, ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 6 […]

ಕೊವಿಡ್-19: ರಾಜ್ಯದಲ್ಲಿಂದು 17 ಸಾವು ಮತ್ತು 1,781 ಹೊಸ ಪ್ರಕರಣಗಳು | Covid-19: 17 deaths and 1,781 new cases in Karnataka today
ಸಾಂದರ್ಭಿಕ ಚಿತ್ರ
ಅರುಣ್​ ಕುಮಾರ್​ ಬೆಳ್ಳಿ

Updated on: Nov 20, 2020 | 10:27 PM

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಶುಕ್ರವಾರ ಸಾಯಂಕಾಲ ಸಿಕ್ಕಿರುವ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 17 ಜನ ಸತ್ತಿದ್ದಾರೆ ಮತ್ತು ಹೊಸದಾಗಿ 1,781 ಜನರಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ 11,621 ಜನ ಮರಣಿಸಿದ್ದಾರೆ ಮತ್ತು ಸೋಂಕಿತರ ಸಂಖ್ಯೆ 8,69,561ಕ್ಕೇರಿದೆ.

ಸೋಂಕಿತರ ಪೈಕಿ 8,33,169 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಮತ್ತು ಮಿಕ್ಕಿದ 24,752 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹಾಗೆಯೇ, ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 6 ಜನ ಬಲಿಯಾಗಿದ್ದಾರೆ ಮತ್ತು ಇಂದು ಒಂದೇ ದಿನ 1,067 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ನಗರದಲ್ಲಿ ಕೊರೊನಾದಿಂದ ಈವರೆಗೆ 4,048 ಜನ ಸಾವನ್ನಪ್ಪಿದ್ದಾರೆ ಮತ್ತು ಸೋಂಕು ಪೀಡಿತರ ಸಂಖ್ಯೆ 3,61,654 ತಲುಪಿದೆ.

ಸೋಂಕಿತರ ಪೈಕಿ 3,39,942 ಜನ ಗುಣಮುಖರಾಗಿದ್ದಾರೆ ಹಾಗೂ ಮಿಕ್ಕಿದ17,663 ಸೋಂಕಿತರಿಗೆ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆಯೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಲಭ್ಯವಾಗಿರುವ ಮಾಹಿತಿ ತಿಳಿಸುತ್ತದೆ.

ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Loading...
Unable to load recommendations.
Follow Us