ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಗುರುವಾರ ಸಾಯಂಕಾಲ ಲಭ್ಯವಾಗಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿನಿಂದ ಇಬ್ಬರು ಮರಣಿಸಿದ್ದು ಹೊಸದಾಗಿ 550 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ರಾಜ್ಯದಲ್ಲಿ ಇದುವರೆಗೆ ಕೊವಿಡ್-19 ವ್ಯಾಧಿಗೆ 12,209 ಜನ ಬಲಿಯಾಗಿದ್ದಾರೆ ಮತ್ತು ಸೋಂಕಿತರ ಒಟ್ಟು ಸಂಖ್ಯೆ 9,37,933ಕ್ಕೇರಿದೆ.
ಸೋಂಕಿತರ ಪೈಕಿ 9,19,503 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರೆ ಮಿಕ್ಕಿದ 6,202 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾಗೆಯೇ, ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಸತ್ತಿದ್ದಾರೆ ಮತ್ತು ಹೊಸದಾಗಿ 311 ಜನರಿಗೆ ಸೋಂಕು ತಗುಲಿದೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 4,385 ಜನ ಸತ್ತಿದ್ದು ಸೋಂಕು ಪೀಡಿತರ ಸಂಖ್ಯೆ 3,98,147 ತಲುಪಿದೆ.
ಸೋಂಕಿತರ ಪೈಕಿ 3,89,829 ಜನರು ಗುಣಮುಖರಾಗಿದ್ದಾರೆ ಮತ್ತು ಉಳಿದ 3,932 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದೊರೆತಿರುವ ಮಾಹಿತಿ ತಿಳಿಸುತ್ತದೆ.