
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಲಭ್ಯವಾಗಿರುವ ಮಾಹಿತಿಯನ್ವಯ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಜನ ಮರಣಿಸಿದ್ದಾರೆ ಮತ್ತು ಹೊಸದಾಗಿ 784 ಜನರಲ್ಲಿ ಕೊರೊನಾ ದೃಢಪಟ್ಟಿದೆ. ರಾಜ್ಯದಲ್ಲಿ ಇದುವರೆಗೆ ಕೊವಿಡ್-19 ಪಿಡುಗಿಗೆ 12,124 ಜನ ಬಲಿಯಾಗಿದ್ದಾರೆ ಮತ್ತು ಒಟ್ಟು ಸೋಂಕಿತರ ಸಂಖ್ಯೆ 9,24, 137ಕ್ಕೇರಿದೆ.
ಸೋಂಕಿತರ ಪೈಕಿ 9,02,817 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ, ಮಿಕ್ಕಿದ 9,177 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾಗೆಯೇ, ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿನಿಂದ ಮೂವರು ಸತ್ತಿದ್ದಾರೆ ಮತ್ತು 437 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ನಗರದಲ್ಲಿ ವ್ಯಾಧಿಯಿಂದ ಇದುವರೆಗೆ 4,336 ಜನ ಸಾವನ್ನಪ್ಪಿದ್ದಾರೆ ಮತ್ತು ಸೋಂಕು ಪೀಡಿತರ ಸಂಖ್ಯೆ 3,90,785 ತಲುಪಿದೆ.
ಸೋಂಕಿತರ ಪೈಕಿ 3,80,769 ಜನ ಗುಣಮುಖರಾಗಿದ್ದಾರೆ, ಮಿಕ್ಕಿದ 5,679 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಲಭ್ಯವಾಗಿರುವ ಮಾಹಿತಿ ತಿಳಿಸುತ್ತದೆ.