AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಕೊವಿಡ್-19 ಅಬ್ಬರ ತಗ್ಗುತ್ತಿಲ್ಲ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಸಾಯಂಕಾಲ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ ಇಂದು ಕೊರೊನಾ ಸೋಂಕಿನಿಂದ 113 ಜನ ಮರಣವನ್ನಿಪ್ಪಿದ್ದು ಸೋಂಕಿಗೆ ಬಲಿಯಾದವರ ಸಂಖ್ಯೆ 9,574 ಕ್ಕೇರಿದೆ. ಹಾಗೆಯೇ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 10,947 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ ಮತ್ತು ಒಟ್ಟು ಸೋಂಕಿತರ ಸಂಖ್ಯೆ 6,68,652 ತಲುಪಿದೆ. ಸೋಂಕಿತರ ಪೈಕಿ 5,42,906 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಮಿಕ್ಕಿದ1,16,153 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು […]

ಕರ್ನಾಟಕದಲ್ಲಿ ಕೊವಿಡ್-19 ಅಬ್ಬರ ತಗ್ಗುತ್ತಿಲ್ಲ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Oct 07, 2020 | 10:56 PM

Share

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಸಾಯಂಕಾಲ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ ಇಂದು ಕೊರೊನಾ ಸೋಂಕಿನಿಂದ 113 ಜನ ಮರಣವನ್ನಿಪ್ಪಿದ್ದು ಸೋಂಕಿಗೆ ಬಲಿಯಾದವರ ಸಂಖ್ಯೆ 9,574 ಕ್ಕೇರಿದೆ. ಹಾಗೆಯೇ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 10,947 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ ಮತ್ತು ಒಟ್ಟು ಸೋಂಕಿತರ ಸಂಖ್ಯೆ 6,68,652 ತಲುಪಿದೆ.

ಸೋಂಕಿತರ ಪೈಕಿ 5,42,906 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಮಿಕ್ಕಿದ1,16,153 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಕೊವಿಡ್-19 ಸೋಂಕಿಗೆ 55 ಜನರು ಬಲಿಯಾಗಿದ್ದಾರೆ ಮತ್ತು ಬರೋಬ್ಬರಿ 5,000 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಕೊರೊನಾದಿಂದ ಈವರೆಗೆ 3,190 ಜನರು ಸಾವನ್ನಪ್ಪಿದ್ದಾರೆ ಮತ್ತು ಸೋಂಕಿತರ ಸಂಖ್ಯೆ 2,62,241ಕ್ಕೇರಿದೆ. ಸೋಂಕಿತರ ಪೈಕಿ 2,00,426 ಜನರು ಗುಣಮುಖರಾಗಿದ್ದಾರೆ ಮತ್ತು ಉಳಿದ58,624 ಸೋಂಕಿತರಿಗೆ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಇಲಾಖೆಯ ಮಾಹಿತಿ ತಿಳಿಸಿದೆ.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ