
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಸಾಯಂಕಾಲ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ ಇಂದು ಕೊರೊನಾ ಸೋಂಕಿನಿಂದ 113 ಜನ ಮರಣವನ್ನಿಪ್ಪಿದ್ದು ಸೋಂಕಿಗೆ ಬಲಿಯಾದವರ ಸಂಖ್ಯೆ 9,574 ಕ್ಕೇರಿದೆ. ಹಾಗೆಯೇ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 10,947 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ ಮತ್ತು ಒಟ್ಟು ಸೋಂಕಿತರ ಸಂಖ್ಯೆ 6,68,652 ತಲುಪಿದೆ.
ಸೋಂಕಿತರ ಪೈಕಿ 5,42,906 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಮಿಕ್ಕಿದ1,16,153 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಕೊವಿಡ್-19 ಸೋಂಕಿಗೆ 55 ಜನರು ಬಲಿಯಾಗಿದ್ದಾರೆ ಮತ್ತು ಬರೋಬ್ಬರಿ 5,000 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಕೊರೊನಾದಿಂದ ಈವರೆಗೆ 3,190 ಜನರು ಸಾವನ್ನಪ್ಪಿದ್ದಾರೆ ಮತ್ತು ಸೋಂಕಿತರ ಸಂಖ್ಯೆ 2,62,241ಕ್ಕೇರಿದೆ. ಸೋಂಕಿತರ ಪೈಕಿ 2,00,426 ಜನರು ಗುಣಮುಖರಾಗಿದ್ದಾರೆ ಮತ್ತು ಉಳಿದ58,624 ಸೋಂಕಿತರಿಗೆ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಇಲಾಖೆಯ ಮಾಹಿತಿ ತಿಳಿಸಿದೆ.