ಕೊವಿಡ್-19: ರಾಜ್ಯದಲ್ಲಿ ಇಂದು ಎರಡು ಸಾವು, 468 ಹೊಸ ಪ್ರಕರಣಗಳು

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇಂದು 2 ಸಾವು ಮತ್ತು 468 ಹೊಸ ಪ್ರಕರಣಗಳು ವರದಿಯಾಗಿವೆ

ಕೊವಿಡ್-19: ರಾಜ್ಯದಲ್ಲಿ ಇಂದು ಎರಡು ಸಾವು, 468 ಹೊಸ ಪ್ರಕರಣಗಳು
ಕೊರೊನಾ ಲಸಿಕೆ
Arun Belly

|

Jan 29, 2021 | 10:16 PM

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಶುಕ್ರವಾರ ಸಾಯಂಕಾಲ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹೊಸದಾಗಿ 468 ಜನರಲ್ಲಿ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿ ಇದುವರೆಗೆ ಕೊವಿಡ್-19 ಪಿಡುಗಿನಿಂದ 12,211 ಜನ ಮರಣಿಸಿದ್ದಾರೆ ಮತ್ತು ಸೋಂಕಿತರ ಒಟ್ಟು ಸಂಖ್ಯೆ 9,38,401ಕ್ಕೇರಿದೆ.

ಸೋಂಕಿತರ ಪೈಕಿ 9,20,110 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ, ಉಳಿದ 6,061 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ.

ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ ಮತ್ತು ಹೊಸದಾಗಿ 264 ಜನರಿಗೆ ಸೋಂಕು ತಗುಲಿದೆ. ನಗರದಲ್ಲಿ ಕೊರೊನಾ ಸೋಂಕಿನಿಂದ ಇದುವರೆಗೆ 4,386 ಜನರು ಬಲಿಯಾಗಿದ್ದಾರೆ ಮತ್ತು ಸೋಂಕು ಪೀಡಿತರ ಸಂಖ್ಯೆ 3,98,411 ತಲುಪಿದೆ

ಸೋಂಕಿತರ ಪೈಕಿ 3,90,147 ಜನರು ಗುಣಮುಖರಾಗಿದ್ದಾರೆ, ಮಿಕ್ಕಿದ 3,877 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆಯೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ತಿಳಿಸುತ್ತದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada