
ಬೆಂಗಳೂರು: ಬೆಂಗಳೂರಿನಲ್ಲಿ ದಿನೆೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ರೋಗ ಲಕ್ಷಣಗಳಿಲ್ಲದ ಸೋಂಕಿತರಿಗೆ ಆಸ್ಪತ್ರೆಗೆ ದಾಖಲಿಸದೇ ವಿಟಾಮಿನ್ಸ್ ಮಾತ್ರೆಗಳ ಕಿಟ್ ನೀಡಿ ಮನೆಯಲ್ಲಿಯೇ ಐಸೋಲೇಶನ್ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್ ಆರ್ ವಿಶ್ವನಾಥ್ ಹೇಳಿದ್ದಾರೆ.
ತುಮಕೂರು ರಸ್ತೆಯಲ್ಲಿರುವ BIEC ಕೋವಿಡ್ ಕೇರ್ ಸೆಂಟರ್‌ಗೆ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸೇರಿದಂತೆ ಹಲವು ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಈ ವೇಳೆ ವಿಶ್ವನಾಥ್, ಮುಂದಿನ ದಿನಗಳಲ್ಲಿ BIECನಲ್ಲೇ ಲ್ಯಾಬ್ ಮಾಡುವ ಬಗ್ಗೆ ಯೋಚನೆ ಮಾಡಲಾಗುವುದು ಎಂದರು.
ದೇಶದಲ್ಲಿಯೇ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್
BIECನಲ್ಲಿ ಈಗ 7000 ಬೆಡ್‌ಗಳ ವ್ಯವಸ್ಥೆ ಇದ್ದು, ಮುಂದೆ ಇದನ್ನು 10,100 ಬೆಡ್‌ಗಳಿಗೆ ವಿಸ್ತರಿಸಲಾಗುವುದು. ಇದು ದೇಶದಲ್ಲೇ ಅತೀ ದೊಡ್ಡ ಕೋವಿಡ್ ಸೆಂಟರ್ ಆಗಲಿದೆ ಎಂದರು. ಜಿಂದಾಲ್‌ನವರು ಇಲ್ಲಿ ಬರುವ ರೋಗ ಲಕ್ಷಣವಿಲ್ಲದ ಸೋಂಕಿತರಿಗೆ ತಿಂಡಿ ವ್ಯವಸ್ಥೆ ಮಾಡುತ್ತಾರೆ. ಹಾಗೇನೇ ಇಸ್ಕಾನ್‌ನವರು ಊಟದ ವ್ಯವಸ್ಥೆ ಮಾಡುವರು ಎಂದು ತಿಳಿಸಿದರು. ಜತೆಗೆ ಮನೋರಂಜನೆಗಾಗಿ ಅಗತ್ಯ ವ್ಯವಸ್ಥೆಯನ್ನು ಕೂಡಾ ಮಾಡಲಾಗುವುದು ಎಂದು ವಿಶ್ವನಾಥ್ ತಿಳಿಸಿದರು.
Published On - 1:08 pm, Sun, 5 July 20