ಕಲಬುರಗಿ: ಕೊರೊನಾ ಡ್ಯೂಟಿಗೆ ಹೋಗ್ತಿದ್ದ ಕೊವಿಡ್ ನರ್ಸ್ ಇದ್ದ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ನರ್ಸ್‌ಗೆ ಗಂಭೀರ ಗಾಯಗಳಾಗಿರುವ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ರಾವೂರ್ ಕ್ರಾಸ್ ಬಳಿ ನಡೆದಿದೆ.
ಕೆಲಸಕ್ಕೆ ಹಾಜರಾಗಲು ಕಲಬುರಗಿಯಿಂದ ಚಿತ್ತಾಪುರಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ನರ್ಸ್ ಸವಾರನ ಹಿಂಬದಿ ಕುಳಿತಿದ್ದರು. ವೇಗವಾಗಿ ಬಂದ ಅಪರಿಚಿತ ವಾಹನ ಕೊವಿಡ್ ನರ್ಸ್ ರಾಜಕುಮಾರಿಗೆ (28) ಇದ್ದ ಬೈಕಿಗೆ ಡಿಕ್ಕಿ ಹೊಡೆದಿದೆ.
ಈ ಪರಿಣಾಮ ನರ್ಸ್ ತಲೆಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ ಹಾಗೂ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Published On - 12:38 pm, Fri, 15 May 20