ಆತ್ಮಹತ್ಯೆಗೆ ಯತ್ನಿಸಿದ್ದ ಕೊರೊನಾ ಸೋಂಕಿತ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

ಜನವರಿ 19ರಂದು ಆತ್ಮಹತ್ಯೆಗೆ ಯತ್ನಿಸಿದ್ದ ಕೊರೊನಾ ಸೋಂಕಿತ ಸಾವನ್ನಪ್ಪಿರುವ ಘಟನೆ ನಗರದ M.S.ರಾಮಯ್ಯ ಆಸ್ಪತ್ರೆಯಲ್ಲಿ ನಡೆದಿದೆ. 42 ವರ್ಷದ ಸೋಂಕಿತ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

  • TV9 Web Team
  • Published On - 19:50 PM, 24 Jan 2021
ಆತ್ಮಹತ್ಯೆಗೆ ಯತ್ನಿಸಿದ್ದ ಕೊರೊನಾ ಸೋಂಕಿತ ಆಸ್ಪತ್ರೆಯಲ್ಲಿ ಸಾವು

ಬೆಂಗಳೂರು: ಜನವರಿ 19ರಂದು ಆತ್ಮಹತ್ಯೆಗೆ ಯತ್ನಿಸಿದ್ದ ಕೊರೊನಾ ಸೋಂಕಿತ ಸಾವನ್ನಪ್ಪಿರುವ ಘಟನೆ ನಗರದ M.S.ರಾಮಯ್ಯ ಆಸ್ಪತ್ರೆಯಲ್ಲಿ ನಡೆದಿದೆ. 42 ವರ್ಷದ ಸೋಂಕಿತ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಮೃತ ವ್ಯಕ್ತಿ ನೆಲಮಂಗಲದ ನಿವಾಸಿ ಎಂದು ತಿಳಿದುಬಂದಿದೆ. ಕೊರೊನಾ ಸೋಂಕಿತ ನೆಲಮಂಗಲದ ಹರ್ಷ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಜನವರಿ 19ರಂದು ಆಸ್ಪತ್ರೆ ಕಿಟಕಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೋಂಕಿತನನ್ನು ತದನಂತರ ಹೆಚ್ಚಿನ ಚಿಕಿತ್ಸೆಗಾಗಿ M.S.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಿಸದೆ ಸೋಂಕಿತ ಕೊನೆಯುಸಿರೆಳೆದಿದ್ದಾರೆ. ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

ಈಜಲು ಹೋಗುತ್ತೇನೆ ಎಂದು ನಿನ್ನೆ ಮನೆಯಿಂದ ತೆರಳಿದ್ದ ಬಾಲಕ.. ಇಂದು ಕೆರೆಯಲ್ಲಿ ಶವವಾಗಿ ಪತ್ತೆ