ಬಿಮ್ಸ್ ಆಸ್ಪತ್ರೆಯಲ್ಲಿ ನಿರ್ಲಕ್ಷ್ಯ, ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಸೋಂಕಿತೆ ಸಾವು?
ಬೆಳಗಾವಿ: ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಸೋಂಕಿತೆ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಕಾಗವಾಡ ತಾಲೂಕಿನ ನಿವಾಸಿಯಾಗಿದ್ದ 35ವರ್ಷದ ಸೋಂಕಿತೆ ತೀವ್ರ ಮಧುಮೇಹದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಇದರ ಬಗ್ಗೆ ಆಸ್ಪತ್ರೆಯ ಸಿಬ್ಬಂದಿಗೆ ಮಾಹಿತಿಯಿದ್ದರೂ ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ, ಮಹಿಳೆ ಆಸ್ಪತ್ರೆಯಲ್ಲಿ ನರಳಿ ನರಳಿ ಮೃತಪಟ್ಟಿದ್ದಾಳೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಜೊತೆಗೆ, ಆಕೆಯ ಕೊನೆ ಕ್ಷಣಗಳ ವಿಡಿಯೋ ಸಹ ಮಾಡಲಾಗಿದ್ದು ಇದೀಗ ಅದು ಎಲ್ಲೆಡೆ ಹರಿದಾಡುತ್ತಿದೆ. ಈ ಹಿಂದೆ, […]

ಬೆಳಗಾವಿ: ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಸೋಂಕಿತೆ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.
ಕಾಗವಾಡ ತಾಲೂಕಿನ ನಿವಾಸಿಯಾಗಿದ್ದ 35ವರ್ಷದ ಸೋಂಕಿತೆ ತೀವ್ರ ಮಧುಮೇಹದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಇದರ ಬಗ್ಗೆ ಆಸ್ಪತ್ರೆಯ ಸಿಬ್ಬಂದಿಗೆ ಮಾಹಿತಿಯಿದ್ದರೂ ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ, ಮಹಿಳೆ ಆಸ್ಪತ್ರೆಯಲ್ಲಿ ನರಳಿ ನರಳಿ ಮೃತಪಟ್ಟಿದ್ದಾಳೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಜೊತೆಗೆ, ಆಕೆಯ ಕೊನೆ ಕ್ಷಣಗಳ ವಿಡಿಯೋ ಸಹ ಮಾಡಲಾಗಿದ್ದು ಇದೀಗ ಅದು ಎಲ್ಲೆಡೆ ಹರಿದಾಡುತ್ತಿದೆ.
ಈ ಹಿಂದೆ, ಬಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿದಾಗ ಆಕೆಗೆ ಸೋಂಕು ದೃಢವಾಗಿತ್ತು. ಬಳಿಕ ಕೋವಿಡ್ ವಾರ್ಡ್‌ಗೆ ಮಹಿಳೆಯನ್ನ ಶಿಫ್ಟ್ ಮಾಡಲಾಗಿತ್ತು ಎಂದು ತಿಳಿದುಬಂದಿದೆ. ಇದಲ್ಲದೆ, ಎರಡು ದಿನಗಳ ಹಿಂದಷ್ಟೇ ಬಿಮ್ಸ್ ಆಸ್ಪತ್ರೆಯಲ್ಲಿ ಸೋಂಕಿತ ವೃದ್ಧನೊಬ್ಬ ಸೂಕ್ತ ಚಿಕಿತ್ಸೆ ಸಿಗದೆ ಮೃತಪಟ್ಟಿದರು ಎನ್ನಲಾಗಿದೆ.
Published On - 12:33 pm, Sun, 19 July 20



