ಆರೋಗ್ಯ ಸಚಿವ ಸುಧಾಕರ್ ಅವರಿಗೆ ಕೋವಿಡ್ ಪಾಸಿಟಿವ್
ನಿನ್ನೆಯಷ್ಟೇ ವಿದೇಶದಿಂದ ಭಾರತಕ್ಕೆ ವಾಪಸ್ ಆಗಿದ್ದ ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಐಸೋಲೇಶನ್ಗೆ ಒಳಗಾಗಿದ್ದಾರೆ.
ಬೆಂಗಳೂರು: ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (Dr.K.Sudhakar) ಅವರಿಗೆ ಕೊರೋನಾ (Covid) ಸೋಂಕು ಪಾಸಿಟಿವ್ (Positive) ಕಾಣಿಸಿಕೊಂಡಿದೆ. ನಿನ್ನೆಯಷ್ಟೇ ವಿದೇಶದಿಂದ ವಾಪಸ್ಸಾಗಿದ್ದ ಆರೋಗ್ಯ ಸಚಿವರು, ಕೋವಿಡ್ ಟೆಸ್ಟ್ಗೆ ಒಳಗಾಗಿದ್ದರು. ಅದರಂತೆ ಬಂದ ವರದಿಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಅದರಂತೆ ಅವರು ಹೋಮ್ ಐಸೋಲೇಷನ್ ಆಗಿದ್ದಾರೆ.
ಇದನ್ನೂ ಓದಿ: ಹಬ್ಬಗಳ ಆಚರಣೆಗೆ ಯಾವ ನಿರ್ಬಂಧಗಳೂ ಇಲ್ಲ, ಅದರೆ ಜನ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು: ಡಾ ಸುಧಾಕರ್
ಕೊರೋನಾ ಸೋಂಕು ತಗುಲಿದ ಬಗ್ಗೆ ಟ್ವೀಟ್ ಮಾಡಿದ ಸಚಿವ ಸುಧಾಕರ್, ”ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ. ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ. ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು ಹೋಮ್ ಐಸೋಲೇಷನ್ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕೋವಿಡ್ ತಪಾಸಣೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: Sonia Gandhi: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು
ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ.
ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ.
ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು ಹೋಮ್ ಐಸೋಲೇಷನ್ ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ.
— Dr Sudhakar K (@mla_sudhakar) June 2, 2022
ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:39 pm, Thu, 2 June 22