ರಾಯಚೂರು: ಕೊರೊನಾ ಸೋಂಕಿಗೆ ಹೆದರಿ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡಿದ್ದೇವೆ. ಆದರೆ, ಇದೀಗ ಸೋಂಕಿನಿಂದ ಗುಣಮುಖನಾದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ರಾಗಲಪರವಿ ಗ್ರಾಮದಲ್ಲಿ ನಡೆದಿದೆ.
ಕೊರೊನಾವನ್ನ ಗೆದ್ರೂ ಕೌಟುಂಬಿಕ ಕಲಹಕ್ಕೆ ಮನನೊಂದ ವೃದ್ಧ
ಬಳ್ಳಾರಿಯ ಜಿಂದಾಲ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಂಬಂಧಿಕರ ಮನೆಗೆ ತೆರಳಿದ್ದ 65 ವರ್ಷದ ವೃದ್ದನಿಗೆ ಅಲ್ಲಿಂದಲೇ ಸೋಂಕು ತಗಲಿತ್ತು. ಬಳಿಕ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದ.
ಆದರೆ, ಅಲ್ಲಿಂದ ಮನೆಗೆ ಹಿಂದಿರುಗಿದ್ದ ವೃದ್ಧ ಕೌಟುಂಬಿಕ ಕಲಹದಿಂದ ಮನನೊಂದು ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಹಾಗಾಗಿ, ನಿನ್ನೆ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಮೃತನ ಅಂತ್ಯ ಸಂಸ್ಕಾರ ಮಾಡಲಾಗಿದೆ ಎಂದು ಸಿಂಧನೂರು ತಹಶೀಲ್ದಾರ ಮಂಜುನಾಥ್ ಟಿವಿ 9ಗೆ ಮಾಹಿತಿ ನೀಡಿದ್ದಾರೆ.