ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ವೃದ್ಧೆ ನೇಣಿಗೆ ಶರಣು..!

|

Updated on: Jun 26, 2020 | 7:48 AM

ಬೆಂಗಳೂರು: ನಗರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ವೃದ್ಧೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೂನ್​ 18ರಂದು ಆಸ್ಪತ್ರೆಗೆ ದಾಖಲಾಗಿದ್ದ 60 ವರ್ಷದ ವೃದ್ಧೆ ಇಂದು ನೇಣಿಗೆ ಶರಣಾಗಿದ್ದಾರೆ. ವೃದ್ಧೆಯು ಇಂದು ಬೆಳಿಗ್ಗಿನ ಜಾವ 2:30ರ ವೇಳೆಗೆ ಸೀರೆಯಿಂದ ನೇಣುಬಿಗಿದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕುಣಿಗಲ್ ಮೂಲದ ಮೃತ ಮಹಿಳೆ ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು. ಜೊತೆಗೆ ಅವರ ಕುಟುಂಬದವರಿಗೂ ಸೋಂಕು ದೃಢವಾಗಿತ್ತು. ಹಾಗಾಗಿ ಆಕೆಯ ಮಗ, ಸೊಸೆ ಮತ್ತು ಮೊಮ್ಮಗ ಸಹ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ವೃದ್ಧೆ ನೇಣಿಗೆ ಶರಣು..!
Follow us on

ಬೆಂಗಳೂರು: ನಗರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ವೃದ್ಧೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೂನ್​ 18ರಂದು ಆಸ್ಪತ್ರೆಗೆ ದಾಖಲಾಗಿದ್ದ 60 ವರ್ಷದ ವೃದ್ಧೆ ಇಂದು ನೇಣಿಗೆ ಶರಣಾಗಿದ್ದಾರೆ. ವೃದ್ಧೆಯು ಇಂದು ಬೆಳಿಗ್ಗಿನ ಜಾವ 2:30ರ ವೇಳೆಗೆ ಸೀರೆಯಿಂದ ನೇಣುಬಿಗಿದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕುಣಿಗಲ್ ಮೂಲದ ಮೃತ ಮಹಿಳೆ ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು. ಜೊತೆಗೆ ಅವರ ಕುಟುಂಬದವರಿಗೂ ಸೋಂಕು ದೃಢವಾಗಿತ್ತು. ಹಾಗಾಗಿ ಆಕೆಯ ಮಗ, ಸೊಸೆ ಮತ್ತು ಮೊಮ್ಮಗ ಸಹ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Published On - 7:36 am, Fri, 26 June 20