ಮತ್ತೊಂದು ದಿನ ಆಸ್ಪತ್ರೆಯಲ್ಲಿ ಗಂಗೂಲಿ; ನಾಳೆ ಡಿಸ್ಚಾರ್ಜ್

ಸೌರವ್ ಗಂಗೂಲಿಯವರ ಅಪೇಕ್ಷೆಯ ಮೇರೆಗೆ ಅವರ ಅಸ್ಪತ್ರೆ ವಾಸವನ್ನು ಒಂದು ದಿನದ ಮಟ್ಟಿಗೆ ವಿಸ್ತರಿಸಲಾಗಿದೆ. ಬಿಸಿಸಿಐ ಅಧ್ಯಕ್ಷನ ಹೃದಯ ಈಗ 20ರ ತರುಣನ ಹೃದಯದಂತೆ ಕೆಲಸ ಮಾಡುತ್ತಿದೆ ಎಂದು ಖ್ಯಾತ ಹಾರ್ಟ್ ಸರ್ಜನ್ ಡಾ. ದೇವಿ ಶೆಟ್ಟಿ ಹೇಳಿದ್ದಾರೆ.

ಮತ್ತೊಂದು ದಿನ ಆಸ್ಪತ್ರೆಯಲ್ಲಿ ಗಂಗೂಲಿ; ನಾಳೆ ಡಿಸ್ಚಾರ್ಜ್
ಸೌರವ್​ ಗಂಗೂಲಿ
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on:Jan 06, 2021 | 4:19 PM

ಕೊಲ್ಕತ್ತಾ: ಮಾಧ್ಯಮಗಳಲ್ಲಿ ಮಂಗಳವಾರದಂದು ವರದಿಯಾಗಿರುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಇಂದು (ಜ.6) ಡಿಸ್ಚಾರ್ಜ್ ಆಗುತ್ತಿಲ್ಲ. ಗುರುವಾರ ಡಿಸ್ಚಾರ್ಜ್ ಆಗಲಿದ್ದಾರೆ. ಮತ್ತೊಂದು ದಿನ ಆಸ್ಪತ್ರೆಯಲ್ಲಿ ಇರುತ್ತೇನೆ ಎನ್ನುವ ನಿರ್ಧಾರವನ್ನು ಖುದ್ದು ಗಂಗೂಲಿಯವರೇ ತೆಗೆದುಕೊಂಡಿದ್ದಾರೆ ಎಂದು ವುಡ್​ಲ್ಯಾಂಡ್ ಆಸ್ಪತ್ರೆಯ ಮೂಲಗಳು ಹೇಳಿವೆ.

‘ಅವರು ಅಸ್ಪತ್ರೆಯಲ್ಲಿರುವವರೆಗೆ ಮತ್ತು ಡಿಸ್ಚಾರ್ಜ್ ಆದ ನಂತರವೂ ನಮ್ಮ ವೈದ್ಯಕೀಯ ತಂಡ ಅವರ ಆರೋಗ್ಯದ ಮೇಲೆ ನಿರಂತರ ನಿಗಾ ಇಡಲಿದೆ. ಅವರನ್ನು ಇಂದೇ ಡಿಸ್ಚಾರ್ಜ್ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಇನ್ನೊಂದು ದಿನ ಕಳೆಯಲು ಸೌರವ್ ಗಂಗೂಲಿ ಇಚ್ಛೆ ವ್ಯಕ್ತಪಡಿಸಿದ್ದಾರೆ’ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಇಂದು ಮಧ್ಯಾಹ್ನ ಮಾಧ್ಯಮದವರೊಂದಿಗೆ ಮಾತಾಡಿದ ಅಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ರೂಪಾಲಿ ಬಸು, ಗಂಗೂಲಿಯವರ ಆರೋಗ್ಯ ಸ್ಥಿರವಾಗಿದೆ. ಕಳೆದ 24 ಗಂಟೆಗಳಲ್ಲಿ ಗಂಗೂಲಿ ಆರೋಗ್ಯದಲ್ಲಿ ಯಾವುದೇ ಏರುಪೇರು ಕಂಡುಬಂದಿಲ್ಲ. ಮತ್ತೊಮ್ಮೆ ಅವರ ರಕ್ತ ಪರೀಕ್ಷೆಯನ್ನು ಮಾಡಲಾಗಿದೆ. ಆವರ ಹೃದಯ ಸೂಕ್ತವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಎಲ್ಲ ಪ್ಯಾರಾಮೀಟರ್​ಗಳು ಸರಿಯಾಗಿವೆ. ಅವರನ್ನು ಗುರುವಾರದಂದು ಡಿಸ್ಚಾರ್ಜ್ ಮಾಡಲಾಗುವುದು’ ಎಂದು ಡಾ. ರೂಪಾಲಿ ಹೇಳಿದರು.

ಜನವರಿ 2ರಂದು ತಮ್ಮ ಮನೆಯ ಜಿಮ್​ನಲ್ಲಿ ವ್ಯಾಯಾಮ ಮಾಡುತ್ತಿದ್ದ ಗಂಗೂಲಿ ಎದೆಯಲ್ಲಿ ಬಿಗಿತ, ತಲೆಭಾರ ಹಾಗೂ ಮೂರ್ಛೆ ಬಂದಂತೆ ಆದ ಬಗ್ಗೆ ದೂರಿದ ನಂತರ ಅವರನ್ನು ಮುಂಜಾನೆ 11 ಗಂಟೆ ಸುಮಾರಿಗೆ ವುಡ್​ಲ್ಯಾಂಡ್ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಗೂಲಿಗೆ ಲಘು ಹೃದಯಾಘಾತವಾಗಿರುವ ವಿಷಯವನ್ನು ತಿಳಿಸಿದ್ದ ವೈದ್ಯರು ಚಿಕಿತ್ಸೆ ಪ್ರಾರಂಭಿಸಿದ್ದರು.

ಗಂಗೂಲಿಯವರನ್ನು ಡಿಸ್ಚಾರ್ಜ್ ಮಾಡಿದ 2-3 ವಾರಗಳವರೆಗೆ ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸಬೇಕಾಗುತ್ತದೆ. ಅನಂತರ ಮುಂದಿನ ಚಿಕಿತ್ಸಾ ಕ್ರಮದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದೆಂದು ಡಾ. ರೂಪಾಲಿ ಹೇಳಿದ್ದಾರೆ.

ಖ್ಯಾತ ಹಾರ್ಟ್ ಸರ್ಜನ್ ಡಾ.ದೇವಿ ಶೆಟ್ಟಿಯವರು ಗಂಗೂಲಿಯನ್ನು ನೋಡಿಕೊಳ್ಳುತ್ತಿರುವ ವೈದಕೀಯ ತಂಡವನ್ನು ಭೇಟಿಯಾಗಿ ಚಿಕಿತ್ಸಾ ಕ್ರಮದ ಬಗ್ಗೆ ಸಲಹೆ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತಾಡಿದ ಡಾ.ಶೆಟ್ಟಿ, ‘ಗಂಗೂಲಿ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ, ಅವರ ಹೃದಯ ಈಗ 20 ರ ಪ್ರಾಯದ ಯುವಕನ ಹೃದಯದಂತೆ ಕಾರ್ಯ ನಿರ್ವಹಿಸುತ್ತಿದೆ’ ಎಂದರು.

ಎದೆ ನೋವಿನಿಂದ ಆಸ್ಪತ್ರೆಗೆ ದಾಖಲಾದ BCCI ಅಧ್ಯಕ್ಷ ಸೌರವ್​ ಗಂಗೂಲಿ

ಗಂಗೂಲಿ ಕಾಣಿಸಿಕೊಂಡಿದ್ದ ಫಾರ್ಚೂನ್ ಅಡುಗೆ ಎಣ್ಣೆ ಜಾಹೀರಾತುಗಳನ್ನು ತಡೆಹಿಡಿದ ಅದಾನಿ ವಿಲ್ಮರ್​ ಸಂಸ್ಥೆ

Published On - 3:58 pm, Wed, 6 January 21

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!