ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್ ಜಾರಿ, ಎಲ್ಲಿ?

ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್ ಜಾರಿ, ಎಲ್ಲಿ?

ಹಾಸನ:ರೈತರಿಗೆ ಸಹಾಯವಾಗುವಂತೆ ಬೆಳೆ ಸಮೀಕ್ಷೆ ಮೊಬೈಲ್ ಆಪ್ ಜಾರಿ ಮಾಡಿದ್ದು, ಇದರ ಬಳಕೆ ಬಗ್ಗೆ ಪ್ರತಿ ಗ್ರಾಮಪಂಚಾಯ್ತಿಯಲ್ಲಿ ರೈತರಿಗೆ ತರಬೇತಿ ನೀಡಲಾಗುತ್ತದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ.

ಆಪ್ ಮೂಲಕ ಪೂರ್ಣ ಮಾಹಿತಿ ಪಡೆಯಬಹುದಾಗಿದೆ..
ಹಾಸನ ತಾಲ್ಲೂಕಿನ ಹೂವಿನ ಹಳ್ಳಿ ಕಾವಲಿನ ರೈತರ ಜಮೀನಿಗೆ ಭೇಟಿ ನೀಡಿ ಬೆಳೆ ಸಮೀಕ್ಷೆ ಮೊಬೈಲ್ ಆಪ್ ಕಾರ್ಯವೈಖರಿಯ ಬಗ್ಗೆ ಪರಿಶೀಲನೆ ನಡೆಸಿ, ನಂತರ ಮಾತನಾಡಿದ ಅವರು ಈ ಆಪ್ ಮೂಲಕ ಯಾವ ಬೆಳೆ ಬೆಳೆದಿದ್ದಾರೆ ಎಷ್ಟು ಎಕರೆ ಎಷ್ಟು ಕುಂಟೆ ಎಂಬ ಪೂರ್ಣ ಮಾಹಿತಿ ಪಡೆಯಬಹುದಾಗಿದೆ ಎಂದರು.

ಮೋಬೈಲ್ ಇಲ್ಲದ ರೈತರ ಹತ್ತಿರ ಆ.24ರ ನಂತರ ಅಧಿಕಾರಿಗಳು ಭೇಟಿ ನೀಡುತ್ತಾರೆ.  ಆಪ್ ಮೂಲಕ ಸಮೀಕ್ಷೆ ನಡೆಸಿ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ಪ್ರಕಟಿಸಲಾಗುತ್ತದೆ. ರೈತರಿಗೆ ಅನುಕೂಲವಾಗಲು ಮುಂದಿನ ದಿನಗಳಲ್ಲಿ ಮಳೆ ನಷ್ಟದ ಸಂದರ್ಭದಲ್ಲಿ ಸಂಪೂರ್ಣ ಮಾಹಿತಿ ಮತ್ತು ಕಾಲ ಕಾಲಕ್ಕೆ ಬೆಳೆಯುವ ಬೆಳೆಗಳ ಕುರಿತ ಮಾಹಿತಿ ಸಂಗ್ರಹವಿರುತ್ತದೆ. ಇದರಿಂದ ಸರ್ಕಾರಕ್ಕೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದು ಸಚಿವರು ತಿಳಿಸಿದರು. ಈ ಸಂದರ್ಭದಲ್ಲಿ ಸಚಿವರಿಗೆ ಕೃಷಿ ಇಲಾಖೆ ಅದಿಕಾರಿಗಳು ಹಾಗೂ ಜಿಲ್ಲಾದಿಕಾರಿ ಆರ್,ಗಿರೀಶ್ ಸಾಥ್ ನೀಡಿದರು .-ಮಂಜುನಾಥ್.ಕೆ.ಬಿ.