ಭಾರಿ ಮಳೆಗೆ ಗೋಪನಹಳ್ಳಿ ಬಳಿ ಜಮೀನುಗಳು ಜಲಾವೃತ, ಬೆಳೆ ಹಾನಿ

| Updated By: ಸಾಧು ಶ್ರೀನಾಥ್​

Updated on: Sep 10, 2020 | 11:18 AM

ಚಿತ್ರದುರ್ಗ: ಜಿಲ್ಲೆಯಲ್ಲಿ ಹಲವೆಡೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ಈ ಪರಿಣಾಮ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯಿಂದ ಗರಣಿಹಳ್ಳ ತುಂಬಿ ಹರಿಯುತ್ತಿದೆ. ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಬಳಿ ರೈತರ ಜಮೀನುಗಳು ಜಲಾವೃತಗೊಂಡಿವೆ. ರೈತರು ಬೆಳೆದಿದ್ದ ಬೆಳೆಗಳು ಹಾನಿಯಾಗಿವೆ. ಗೋಪನಹಳ್ಳಿ ಅಷ್ಟೇ ಅಲ್ಲದೆ ಜಿಲ್ಲೆಯ ಬಹುತೇಕ ಕಡೆ ಇದೇ ರೀತಿ ಪರಿಸ್ಥಿತಿ ನಿರ್ಮಾಣವಾಗಿದೆ. ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಮಂದಿ ಈಗ ವರುಣನ ಅಬ್ಬರಕ್ಕೆ ತತ್ತರಿಸಿದ್ದಾರೆ.

ಭಾರಿ ಮಳೆಗೆ ಗೋಪನಹಳ್ಳಿ ಬಳಿ ಜಮೀನುಗಳು ಜಲಾವೃತ, ಬೆಳೆ ಹಾನಿ
Follow us on

ಚಿತ್ರದುರ್ಗ: ಜಿಲ್ಲೆಯಲ್ಲಿ ಹಲವೆಡೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ಈ ಪರಿಣಾಮ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯಿಂದ ಗರಣಿಹಳ್ಳ ತುಂಬಿ ಹರಿಯುತ್ತಿದೆ.

ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಬಳಿ ರೈತರ ಜಮೀನುಗಳು ಜಲಾವೃತಗೊಂಡಿವೆ. ರೈತರು ಬೆಳೆದಿದ್ದ ಬೆಳೆಗಳು ಹಾನಿಯಾಗಿವೆ. ಗೋಪನಹಳ್ಳಿ ಅಷ್ಟೇ ಅಲ್ಲದೆ ಜಿಲ್ಲೆಯ ಬಹುತೇಕ ಕಡೆ ಇದೇ ರೀತಿ ಪರಿಸ್ಥಿತಿ ನಿರ್ಮಾಣವಾಗಿದೆ. ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಮಂದಿ ಈಗ ವರುಣನ ಅಬ್ಬರಕ್ಕೆ ತತ್ತರಿಸಿದ್ದಾರೆ.