Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಿ ಕೋಟಿ ವಿದ್ಯುತ್​ ಬಿಲ್​ ಬಾಕಿ ಇಟ್ಕೊಂಡ ಧಾರವಾಡ ಜಿಲ್ಲೆಯ ಸರ್ಕಾರಿ ಕಚೇರಿಗಳು

ಆಧುನಿಕತೆ ಬೆಳೆದಂತೆ ವಿದ್ಯುತ್​ನ ಅವಶ್ಯಕತೆಯೂ ಹೆಚ್ಚುತ್ತಾ ಹೋಗುತ್ತಿದೆ. ಯಾವುದೇ ಕೆಲಸವಿರಲಿ ಇತ್ತೀಚಿನ ದಿನಗಳಲ್ಲಿ ವಿದ್ಯುತ್ ಬೇಕೇ ಬೇಕು. ಹೀಗಾಗಿ ಅಭಿವೃದ್ಧಿ, ಅವಶ್ಯಕತೆ ವಿಚಾರ ಬಂದಾಗ ವಿದ್ಯುತ್ ನ ವಿಷಯ ಚರ್ಚೆಗೆ ಬಂದೇ ಬರುತ್ತದೆ. ಇಂತಹ ಅತ್ಯವಶ್ಯಕ ವಿದ್ಯುತ್ ಶಕ್ತಿಯನ್ನು ಬಳಸಿಕೊಂಡು ಕೂಡ ಧಾರವಾಡ ಜಿಲ್ಲೆಯಲ್ಲಿ ಸರಕಾರಿ ಕಚೇರಿಗಳು ಹತ್ತಾರು ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿವೆ. ಮೊದಲೇ ಗೃಹಜ್ಯೋತಿ ಗ್ಯಾರಂಟಿ ಯೋಜನೆಯಿಂದ ಕಂಗೆಟ್ಟಿರೋ ಹೆಸ್ಕಾಂ ಗೆ ಇದೀಗ ಈ ಪೆಂಡಿಂಗ್ ಬಿಲ್ ತಲೆ ಬಿಸಿ ಮಾಡುತ್ತಿದೆ.

ಕೋಟಿ ಕೋಟಿ ವಿದ್ಯುತ್​ ಬಿಲ್​ ಬಾಕಿ ಇಟ್ಕೊಂಡ ಧಾರವಾಡ ಜಿಲ್ಲೆಯ ಸರ್ಕಾರಿ ಕಚೇರಿಗಳು
ಧಾರವಾಡ ಹೆಸ್ಕಾಂ ಬಿಲ್​ ಬಾಕಿ
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 08, 2023 | 3:26 PM

ಧಾರವಾಡ, ಡಿ.08: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ(Hescom)ವು ಒಟ್ಟು ಏಳು ಜಿಲ್ಲೆಗಳಲ್ಲಿ ಬರುತ್ತದೆ. ರಾಜ್ಯದ ಪ್ರತಿಷ್ಠಿತ ವಿದ್ಯುತ್ ಸರಬರಾಜು ಕಂಪನಿಗಳ ಪೈಕಿ ಇದು ಕೂಡ ಒಂದು. ಈ ಕಂಪನಿ ಅಡಿಯಲ್ಲಿ ರಾಜ್ಯದ ಎರಡನೇ ದೊಡ್ಡ ನಗರ ಖ್ಯಾತಿಯ ಹುಬ್ಬಳ್ಳಿ-ಧಾರವಾಡ(Hubballi-Dharwad) ಅವಳಿ ನಗರ ಹಾಗೂ ಬೆಳಗಾವಿ ಬರುತ್ತವೆ. ಇದೀಗ ಈ ಏಳು ಜಿಲ್ಲೆಗಳ ವ್ಯಾಪ್ತಿಯಲ್ಲಿನ ಸರಕಾರಿ ಕಚೇರಿಗಳಿಂದಲೇ ಹೆಸ್ಕಾಂ ಗೆ ನೂರಾರು ಕೋಟಿ ರೂಪಾಯಿ ವಿದ್ಯುತ್ ಬಿಲ್ ಬರಬೇಕಿದೆ. ಇಂತಹ ವೇಳೆ ಧಾರವಾಡ ಜಿಲ್ಲೆಯಲ್ಲಿಯೇ ಕೋಟಿ ಕೋಟಿ ಬಿಲ್ ಸರಕಾರಿ ಕಚೇರಿಗಳಿಂದಲೇ ಬರಬೇಕಿದೆ.

ಹಲವಾರು ಕಚೇರಿಗಳ ವಿದ್ಯುತ್ ಬಿಲ್ ಕೋಟಿ ಕೋಟಿ ದಾಟಿದ್ದರೂ, ಅವುಗಳ ವಿದ್ಯುತ್ ಸಂಪರ್ಕವನ್ನು ಹೆಸ್ಕಾಂ ಕತ್ತರಿಸಲು ಬರುವುದಿಲ್ಲ. ಇದಕ್ಕೆ ಒಂದು ಉದಾಹರಣೆ ಎಂದರೆ ಅವಳಿ ನಗರಕ್ಕೆ ನೀರು ಪೂರೈಸಲು ಹು-ಧಾ ಮಹಾನಗರ ಪಾಲಿಕೆ ತೆಗೆದುಕೊಳ್ಳುತ್ತಿರುವ ವಿದ್ಯುತ್ ಉಪಯೋಗ. ಹೌದು, ಇದೀಗ ಇದೇ ಕೋಟಿ ಕೋಟಿ ಲೆಕ್ಕದಲ್ಲಿ ಬಾಕಿ ಉಳಿದಿದೆ. ಜಿಲ್ಲೆಯ ಗ್ರಾಮ ಪಂಚಾಯತಿಗಳಿಂದಲೇ ಸುಮಾರು 10 ಕೋಟಿ ರೂಪಾಯಿ ಬಿಲ್ ಪಾವತಿಯಾಗಬೇಕಿದೆ. ಇನ್ನು ಮಹಾನಗರ ಪಾಲಿಕೆಯೇ ಸುಮಾರು 16 ಕೋಟಿ ರೂಪಾಯಿ ಬಿಲ್ ಬಾಕಿ ಉಳಿಸಿಕೊಂಡಿದೆ.

ಇದನ್ನೂ ಓದಿ:4 ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ ಉಳಿಸಿಕೊಂಡ ನೀರಾವರಿ ಇಲಾಖೆ: ಡಿಕೆ ಶಿವಕುಮಾರ್​

ಅವಳಿ ನಗರಕ್ಕೆ ನೀರು ಪೂರೈಸಲು ಬೇಕಾಗಿರುವ ವಿದ್ಯುತ್ ಸಾಕಷ್ಟು ದೊಡ್ಡ ಪ್ರಮಾಣದಲ್ಲಿರುತ್ತದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನವಿಲುತೀರ್ಥ ಡ್ಯಾಂನಿಂದ ನೀರನ್ನು ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಬಳಿ ಇರುವ ನೀರು ಸಂಗ್ರಹಾಗಾರಕ್ಕೆ ಪಂಪ್ ಮಾಡಲಾಗುತ್ತದೆ. ಅಲ್ಲಿಂದ ಮತ್ತೆ ಅವಳಿ ನಗರಕ್ಕೆ ನೀರು ಪೂರೈಕೆಯಾಗುತ್ತದೆ. ಇದಕ್ಕೆ ಸಾಕಷ್ಟು ಪ್ರಮಾಣದ ವಿದ್ಯುತ್ ಬೇಕು. ಹೀಗೆ ಅನೇಕ ಸರಕಾರಿ ಕಚೇರಿಗಳೇ ಕೋಟಿ ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿವೆ. ಇಷ್ಟೊಂದು ಹಣವನ್ನು ಸರಕಾರಿ ಕಚೇರಿಗಳೇ ಬಾಕಿ ಉಳಿಸಿಕೊಂಡಿರುವಾಗ ಕಂಪನಿ ಅಭಿವೃದ್ಧಿಯಾಗೋದು ಹೇಗೆ ಎನ್ನುವ ಪ್ರಶ್ನೆ ಎದುರಾಗುತ್ತಿದೆ.

ಇನ್ನು ಇಷ್ಟೊಂದು ಹಣ ಬಾಕಿ ಉಳಿಸಿಕೊಂಡಿರುವ ಹೆಸ್ಕಾಂ ಸಿಬ್ಬಂದಿ ಒಂದು ತಿಂಗಳು ವಿದ್ಯುತ್ ಬಿಲ್ ಕಟ್ಟದೇ ಹೋದರೆ ಸಾಮಾನ್ಯ ಜನರು ಮನೆಯ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡುತ್ತಾರೆ. ಇದು ಎಷ್ಟರಮಟ್ಟಿಗೆ ಸರಿ? ಎಂದು ಪ್ರಶ್ನಿಸುತ್ತಿದ್ದಾರೆ. ಸ್ಥಳೀಯರು, ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸರಕಾರ ಉಚಿತ ವಿದ್ಯುತ್ ಪೂರೈಸುತ್ತಿದೆ. ಇದಕ್ಕಾಗಿ ಶೇಕಡಾ 70 ವಿದ್ಯುತ್ ಖರ್ಚಾಗುತ್ತದೆ. ಇದರೊಂದಿಗೆ ಅನೇಕ ಯೋಜನೆಗಳಡಿ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದೆಲ್ಲದರ ಮಧ್ಯೆ ಹೆಸ್ಕಾಂ ಗೆ ಸರಕಾರಿ ಕಚೇರಿಯಿಂದಲೂ ಕೂಡ ಹೀಗೆ ಕೋಟಿ ಕೋಟಿ ರೂಪಾಯಿ ಬಾಕಿ ಉಳಿದರೆ ಹೇಗೆ ಅನ್ನೋ ಪ್ರಶ್ನೆ ಅಧಿಕಾರಿಗಳನ್ನು ಕಾಡುತ್ತಿದೆ. ಹೆಸ್ಕಾಂ ಅಧಿಕಾರಿಗಳು ಮತ್ತಷ್ಟು ಗಟ್ಟಿ ನಿಲುವು ತೆಗೆದುಕೊಂಡಾಗ ಮಾತ್ರ ಹೆಸ್ಕಾಂ ಗೆ ಬರಬೇಕಾಗಿರೋ ಬಾಕಿ ಆದಷ್ಟು ಬೇಗನೇ ಬರುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !