ಮಂಗಳೂರಿನಲ್ಲಿ ನಿಯಂತ್ರಣಕ್ಕೆ ಬಾರದ ಪರಿಸ್ಥಿತಿ: ನಾಳೆ ಮಧ್ಯರಾತ್ರಿವರೆಗೆ ಕರ್ಫ್ಯೂ ಜಾರಿ

ಮಂಗಳೂರು: ಮಂಗಳೂರು ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆ ಹಿಂಸಾ ಸ್ವರೂಪ ಪಡೆದುಕೊಂಡಿದೆ. ಕಲ್ಲು ತೂರಾಟ ಮಾಡಿದ ಕಾರಣ ಪೊಲೀಸರು ಲಾಠಿಚಾರ್ಜ್ ನಡೆಸಿದ್ರು. ಆದ್ರೂ ಪ್ರತಿಭಟನೆ ನಿಲ್ಲದ ಕಾರಣ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ರು. ಇದೀಗ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದ ಕೇಂದ್ರ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ನಾಳೆ ಮಧ್ಯರಾತ್ರಿಯವರೆಗೂ ಕರ್ಫ್ಯೂ ಜಾರಿ: ಪಾಂಡೇಶ್ವರ, ಕದ್ರಿ, ಉರ್ವ, ಬರ್ಕೆ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ P.S.ಹರ್ಷಾ ಆದೇಶಿಸಿದ್ದಾರೆ. ನಾಳೆ […]

ಮಂಗಳೂರಿನಲ್ಲಿ ನಿಯಂತ್ರಣಕ್ಕೆ ಬಾರದ ಪರಿಸ್ಥಿತಿ: ನಾಳೆ ಮಧ್ಯರಾತ್ರಿವರೆಗೆ ಕರ್ಫ್ಯೂ ಜಾರಿ
Follow us
ಸಾಧು ಶ್ರೀನಾಥ್​
|

Updated on:Dec 19, 2019 | 7:17 PM

ಮಂಗಳೂರು: ಮಂಗಳೂರು ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆ ಹಿಂಸಾ ಸ್ವರೂಪ ಪಡೆದುಕೊಂಡಿದೆ. ಕಲ್ಲು ತೂರಾಟ ಮಾಡಿದ ಕಾರಣ ಪೊಲೀಸರು ಲಾಠಿಚಾರ್ಜ್ ನಡೆಸಿದ್ರು. ಆದ್ರೂ ಪ್ರತಿಭಟನೆ ನಿಲ್ಲದ ಕಾರಣ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ರು. ಇದೀಗ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದ ಕೇಂದ್ರ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.

ನಾಳೆ ಮಧ್ಯರಾತ್ರಿಯವರೆಗೂ ಕರ್ಫ್ಯೂ ಜಾರಿ: ಪಾಂಡೇಶ್ವರ, ಕದ್ರಿ, ಉರ್ವ, ಬರ್ಕೆ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ P.S.ಹರ್ಷಾ ಆದೇಶಿಸಿದ್ದಾರೆ. ನಾಳೆ ಮಧ್ಯರಾತ್ರಿಯವರೆಗೂ ಕರ್ಫ್ಯೂ ಜಾರಿಯಲ್ಲಿರಲಿದೆ. ಈಗಾಗಲೇ 100ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧರಣಿ ವೇಳೆ 40ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಗೆ ಗಾಯವಾಗಿದ್ದು, ಘಟನೆಯಲ್ಲಿ 100ಕ್ಕೂ ಹೆಚ್ಚು ಪ್ರತಿಭಟನಾಕಾರರಿಗೆ ಗಾಯಗಳಾಗಿದೆ. ಗಾಯಾಳುಗಳು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ಕಟ್ಟೆಚ್ಚರ ವಹಿಸಲು ಪೊಲೀಸ್ ಆಯುಕ್ತ ಸೂಚನೆ: ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸಬೇಕು. ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಬೇಕು. ಹೀಗಾಗಿ ಮಂಗಳೂರು ಉತ್ತರ ಪೊಲೀಸ್ ಠಾಣೆ ಬಳಿ ಎಲ್ಲ ಪೊಲೀಸ್‌ ತುಕಡಿಗಳನ್ನು ಒಂದು ಕಡೆ ಸೇರಿಸಲು ನಗರ ಪೊಲೀಸ್ ಆಯುಕ್ತ ಡಾ.P.S.ಹರ್ಷ ಸೂಚಿಸಿದ್ದಾರೆ.

ನಾಳೆ ಶಾಲಾ, ಕಾಲೇಜುಗಳಿಗೆ ರಜೆ: ಮಂಗಳೂರಿನಲ್ಲಿ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶಾಲಾ, ಕಾಲೇಜುಗಳಿಗೆ ರಜೆ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್ ಆದೇಶಿಸಿದ್ದಾರೆ.

Published On - 6:40 pm, Thu, 19 December 19

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ