AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಹಗಲು ಮಾತ್ರ ಕರ್ಫ್ಯೂ, ಸೋಮವಾರ ಸಂಪೂರ್ಣ ರಿಲೀಫ್ -ಯಡಿಯೂರಪ್ಪ

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂಸಾತ್ಮಕ ಪ್ರತಿಭಟನೆ ಹಿನ್ನೆಲೆ ಇಂದು ಮಂಗಳೂರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದಾರೆ. ಪೊಲೀಸರ ಫೈರಿಂಗ್​ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೃತರ ಕುಟುಂಬಸ್ಥರ ಜೊತೆ ಸುಮಾರು ಅರ್ಧಗಂಟೆ ಚರ್ಚೆ ಮಾಡಿ ಸಮಸ್ಯೆ ಆಲಿಸಿದ್ದೇನೆ. ಕಾನೂನು ಚೌಕಟ್ಟಿನಲ್ಲಿ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗೆ ತಿಳಿಸಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ಬಿಎಸ್​ವೈ ಹೇಳಿದರು. ಮ.3ರಿಂದ ಸಂಜೆ 6ರವರೆಗೆ ಕರ್ಫ್ಯೂ ಸಡಿಲಿಕೆ: ಜಿಲ್ಲೆಯ ಮುಖಂಡರ ಜತೆಯೂ ಅರ್ಧ ಗಂಟೆ ಕಾಲ ಚರ್ಚೆ ಮಾಡಿದ್ದೇನೆ. ಅವರೂ ಸಹ […]

ನಾಳೆ ಹಗಲು ಮಾತ್ರ ಕರ್ಫ್ಯೂ, ಸೋಮವಾರ ಸಂಪೂರ್ಣ ರಿಲೀಫ್ -ಯಡಿಯೂರಪ್ಪ
ಸಾಧು ಶ್ರೀನಾಥ್​
|

Updated on: Dec 21, 2019 | 1:52 PM

Share

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂಸಾತ್ಮಕ ಪ್ರತಿಭಟನೆ ಹಿನ್ನೆಲೆ ಇಂದು ಮಂಗಳೂರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದಾರೆ. ಪೊಲೀಸರ ಫೈರಿಂಗ್​ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೃತರ ಕುಟುಂಬಸ್ಥರ ಜೊತೆ ಸುಮಾರು ಅರ್ಧಗಂಟೆ ಚರ್ಚೆ ಮಾಡಿ ಸಮಸ್ಯೆ ಆಲಿಸಿದ್ದೇನೆ. ಕಾನೂನು ಚೌಕಟ್ಟಿನಲ್ಲಿ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗೆ ತಿಳಿಸಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ಬಿಎಸ್​ವೈ ಹೇಳಿದರು.

ಮ.3ರಿಂದ ಸಂಜೆ 6ರವರೆಗೆ ಕರ್ಫ್ಯೂ ಸಡಿಲಿಕೆ: ಜಿಲ್ಲೆಯ ಮುಖಂಡರ ಜತೆಯೂ ಅರ್ಧ ಗಂಟೆ ಕಾಲ ಚರ್ಚೆ ಮಾಡಿದ್ದೇನೆ. ಅವರೂ ಸಹ ಜಿಲ್ಲೆಯ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಿದ್ದಾರೆ. ಮಂಗಳೂರಿನಲ್ಲಿ ಕರ್ಫ್ಯೂ ತೆಗೆಯುವಂತೆ ತಿಳಿಸಿದ್ದಾರೆ. ಮಧ್ಯಾಹ್ನ 3ರಿಂದ 6ರವರೆಗೆ ಕರ್ಫ್ಯೂ ಸಡಿಲಿಕೆ ಮಾಡಲಾಗುವುದು. ರಾತ್ರಿ ವೇಳೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಮತ್ತೆ ನಾಳೆ ಹಗಲು ಹೊತ್ತಿನಲ್ಲಿ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ. ಸೋಮವಾರವೂ ಕರ್ಫ್ಯೂ ಇರುವುದಿಲ್ಲ. ಕ್ರಿಸ್​ಮಸ್​ಗೆ ಯಾವುದೇ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ನಮ್ಮ ಸರ್ಕಾರ ಭೇದ ಭಾವ ಮಾಡಲ್ಲ: ಕೇರಳದಿಂದ ಬಂದ ಪತ್ರಕರ್ತರ ಬಳಿ ಐಡಿ ಕಾರ್ಡ್ ಇರಲಿಲ್ಲ. ಅದರ ಬಗ್ಗೆ ತನಿಖೆ ನಡೆಸುವಂತೆಯೂ ತಿಳಿಸಲಾಗಿದೆ. ಇಂತಹ ಘಟನೆ ನಡೆದಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ಈ ಬಗ್ಗೆ ನನಗೆ ಸಮಾಧಾನವಿಲ್ಲ. ದಯಮಾಡಿ ಎಲ್ಲರೂ ಶಾಂತಿಯನ್ನು ಕಾಪಾಡಿ. ನಮ್ಮ ಸರ್ಕಾರಕ್ಕೆ ಯಾವುದೇ ರೀತಿಯ ಭೇದ ಭಾವವಿಲ್ಲ. ಈ ಹಿಂದೆಯೂ ಭೇದಭಾವ ಮಾಡಿಲ್ಲ, ಈಗಲೂ ಮಾಡ್ತಿಲ್ಲ. ಮುಂದೆಯೂ ನಾವು ಭೇದಭಾವ ಮಾಡುವುದಿಲ್ಲ. ಎಲ್ಲಾ ಧರ್ಮಗಳನ್ನು ಒಂದೇ ರೀತಿಯಲ್ಲಿ ಕಾಣುತ್ತೇವೆ ಎಂದರು.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್