ಬೆಳಗಾವಿ: ತಾಂತ್ರಿಕ ದೋಷದಿಂದಾಗಿ ಆಕ್ಸಿಜೆನ್ ಸಿಲಿಂಡರ್ ಸ್ಫೋಟಿಸಿದ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ.
ಹೌದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಈ ಅವಘಡ ಸಂಭವಿಸಿದೆ. ಆಸ್ಪತ್ರೆ ಸಿಬ್ಬಂದಿ ವಾರ್ಡ್‌ನಲ್ಲಿ ಆಕ್ಸಿಜನ್ ಸಿಲಿಂಡರ್ ಅನ್ನು ಬದಲಿಸುವ ವೇಳೆ ಈ ಅವಘಡ ಸಂಭವಿಸಿದೆ. ತಾಂತ್ರಿಕ ದೋಷವೇ ಆಕ್ಸಿಜನ್ ಸಿಲಿಂಡರ್ ಸ್ಪೋಟಕ್ಕೆ ಕಾರಣವೆನ್ನಲಾಗುತ್ತಿದೆ.
ಘಟನೆಯಲ್ಲಿ ವಾರ್ಡ್ ನಲ್ಲಿದ್ದ ಓರ್ವ ಡಾಕ್ಟರ್, ಓರ್ವ ನರ್ಸ್ ಹಾಗೂ ಇಬ್ಬರು ವಾರ್ಡ್ ಬಾಯ್ ಗಳಿಗೆ ಗಾಯಗಳಾಗಿವೆ. ಗಾಯಗೊಂಡ ಸಿಬ್ಬಂದಿಗೆ ಬಿಮ್ಸ್ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
Published On - 5:59 pm, Sun, 26 July 20