ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಪರಿಷ್ಕೃತ ಡಿಎ ಪಾವತಿ

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಇದು. ಜುಲೈನಿಂದ ಡಿ.ಎ. ಪರಿಷ್ಕರಣೆ ಆಗಲಿದೆ. ಈ ಬಗ್ಗೆ ರಾಜ್ಯಸಭೆಯಲ್ಲಿ ಲಿಖಿತ ಉತ್ತರವನ್ನು ನೀಡಲಾಗಿದೆ. ಕೊರೊನಾ ಕಾರಣಕ್ಕೆ ಮೂರು ಕಂತು ಡಿಎ, ಡಿಆರ್ ಕಡಿತ ಮಾಡಿತ್ತು.

ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಪರಿಷ್ಕೃತ ಡಿಎ ಪಾವತಿ
ಸಾಂದರ್ಭಿಕ ಚಿತ್ರ
Follow us
Srinivas Mata
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 10, 2021 | 2:42 PM

ಕೇಂದ್ರ ಸರ್ಕಾರಿ ನೌಕರರಿಗೆ ಸದ್ಯದಲ್ಲೇ ಪರಿಷ್ಕೃತವಾದ ಹೆಚ್ಚಿನ ದರದ ತುಟ್ಟಿ ಭತ್ಯೆ ದೊರೆಯಲಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಮುಂದಿನ ಕಂತಿನ ತುಟ್ಟಿ ಭತ್ಯೆ (ಡಿಎ) ಜುಲೈ 1, 2021ಕ್ಕೆ ಬಾಕಿ ಇದೆ. ಕೇಂದ್ರ ಸರ್ಕಾರವು ಈ ಬಗ್ಗೆ ರಾಜ್ಯಸಭೆಗೆ ಲಿಖಿತ ಉತ್ತರವನ್ನು ನೀಡಿದೆ. ಯಾವಾಗ ಮುಂದಿನ ಕಂತಿನ ಡಿಎ ಬಿಡುಗಡೆಯ ತೀರ್ಮಾನವನ್ನು ತೆಗೆದುಕೊಳ್ಳಲಾಗುತ್ತದೋ ಆಗ 1-1-2020, 1-7-2020 ಹಾಗೂ 1-1-2021ರ ದರವನ್ನು ಮತ್ತೆ ನೀಡಲಾಗುವುದು ಎಂದು ತಿಳಿಸಲಾಗಿದೆ.

ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಸಹ ಮಾತನಾಡಿ, ಈ ಹಿಂದಿನ ಮೂರು ದರಗಳನ್ನು ಮತ್ತೆ ನೀಡಲಾಗುವುದು. 1-7-2021ರಿಂದ ಕ್ಯುಮುಲೇಟಿವ್ ಪರಿಷ್ಕೃತ ದರದಲ್ಲಿ ಆರಂಭಿಸಲಾಗುವುದು ಎಂದಿದ್ದಾರೆ. ಇದರರ್ಥ ಏನೆಂದರೆ, ಪರಿಷ್ಕೃತ ಡಿಎ ದರವು ಕಳೆದ ವರ್ಷ ಸ್ಥಗಿತವಾಗಿದ್ದ ದರಕ್ಕಿಂತ ಹೆಚ್ಚಿನದಾಗಿರುತ್ತದೆ.

ಕೊರೊನಾ ಬಿಕ್ಕಟ್ಟಿನ ಕಾರಣಕ್ಕೆ ಕೇಂದ್ರ ಸರ್ಕಾರವು ಕಳೆದ ವರ್ಷ ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ ಪಿಂಚಣಿದಾರರಿಗೆ ಡಿಎ ಅಥವಾ ಡಿಯರ್​ನೆಸ್ ಅಲೋಯನ್ಸ್ ಮತ್ತು ಡಿಯರ್​ನೆಸ್ ರಿಲೀಫ್ ಮೂರು ಕಂತು 1-1-2020, 1-7-2020 ಹಾಗೂ 1-1-2021ಕ್ಕೆ ಸ್ಥಗಿತಗೊಳಿಸಿತ್ತು. ಈ ಸಂಬಂಧ ಠಾಕೂರ್ ಮಾತನಾಡಿ, ಡಿಎ, ಡಿಆರ್, ಸ್ಥಗಿತಗೊಳಿಸಿದ್ದರಿಂದ ಸರ್ಕಾರಕ್ಕೆ 37,530.08 ಕೋಟಿ ರೂಪಾಯಿ ಉಳಿತಾಯ ಮಾಡಲು ಸಾಧ್ಯವಾಯಿತು ಎಂದಿದ್ದಾರೆ. ಕೋವಿಡ್- 19 ಸನ್ನಿವೇಶದಲ್ಲಿ ಆರ್ಥಿಕತೆಗೆ ಇದರಿಂದ ನೆರವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: New Wage Code: ಏಪ್ರಿಲ್​ನಿಂದ ನಿಮ್ಮ ಕೈಗೆ ಬರುವ ಸಂಬಳದ ಲೆಕ್ಕಾಚಾರವೇ ಆಗಲಿದೆ ಬದಲು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ