Daily Horoscope; ದಿನ ಭವಿಷ್ಯ | ವೃಶ್ಚಿಕ ರಾಶಿಯವರಿಗೆ ವಿವಾಹ ಮಾತುಕತೆಗಳು ತಪ್ಪಿ ಹೋಗಲಿವೆ

Rashi Bhavishya: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಪಾಡ್ಯ ತಿಥಿ, ಭಾನುವಾರ, 28, ಫೆಬ್ರವರಿ 2021 ವಾರ ಭವಿಷ್ಯ.

Daily Horoscope; ದಿನ ಭವಿಷ್ಯ | ವೃಶ್ಚಿಕ ರಾಶಿಯವರಿಗೆ ವಿವಾಹ ಮಾತುಕತೆಗಳು ತಪ್ಪಿ ಹೋಗಲಿವೆ
ದಿನ ಭವಿಷ್ಯ
Edited By:

Updated on: Feb 28, 2021 | 2:37 PM

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಪಾಡ್ಯ ತಿಥಿ, ಭಾನುವಾರ, 28, ಫೆಬ್ರವರಿ 2021. ಪುಬ್ಬೆ ನಕ್ಷತ್ರ, ರಾಹುಕಾಲ: ಇಂದು ಸಂಜೆ 4:53ರಿಂದ ಇಂದು ಸಂಜೆ 6 :21 ತನಕ ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.35. ಸೂರ್ಯಾಸ್ತ: ಸಂಜೆ 6.22.

ದಿನಾಂಕ: 28-02-2021 ರ ಭಾನುವಾರದ ರಾಶಿಭವಿಷ್ಯ

ಮೇಷ: ಸಂಗಾತಿಯೊಂದಿಗೆ ಅನಗತ್ಯ ಸಂಘರ್ಷದಿಂದ ಮನೆಯಲ್ಲಿ ಅಶಾಂತಿಯ ವಾತಾವರಣವಿರುವುದು. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ. ಉದ್ಯೋಗ ಕ್ಷೇತ್ರದಲ್ಲಿ ಕೊಂಚ ಬಿಡುವು ಸಿಗಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ.ಶುಭ ಸಂಖ್ಯೆ: 3

ವೃಷಭ: ಉದ್ಯೋಗ, ವ್ಯವಹಾರದಲ್ಲಿ ಕೊಂಚ ಮುನ್ನಡೆ ಕಾಣಲಿದ್ದೀರಿ. ಇಷ್ಟು ದಿನ ನೀವು ಚಿಂತೆ ಮಾಡುತ್ತಿದ್ದ ವಿಚಾರಗಳಿಗೆ ಪರಿಹಾರ ಸಿಗಲಿದೆ. ಮನೆ ದೇವರ ಅನುಗ್ರಹ ನಿಮಗೆ ಸಿಗುವುದು. ಯೋಗ್ಯ ವಯಸ್ಕರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.ಶುಭ ಸಂಖ್ಯೆ: 9

ಮಿಥುನ: ನೀವು ನಿರೀಕ್ಷಿಸಿದ ರೀತಿಯಲ್ಲಿ ಕೆಲಸ ಕಾರ್ಯಗಳು ನಡೆದುಹೋಗಲಿವೆ. ಸಂಗಾತಿಯ ಬಹುದಿನಗಳ ಮನದಾಸೆ ಪೂರೈಸಲಿದ್ದೀರಿ. ವ್ಯಾಪಾರಿಗಳಿಗೆ ಸ್ವಲ್ಪ ಮಟ್ಟಿಗೆ ಲಾಭವಾಗಲಿದೆ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ತಪ್ಪದು.ಶುಭ ಸಂಖ್ಯೆ: 4

ಕರ್ಕಟಕ: ನಿರುದ್ಯೋಗಿಗಳು ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಪಡೆಯಲಿದ್ದಾರೆ. ವಿದ್ಯಾರ್ಥಿಗಳಿಗೆ ಭವಿಷ್ಯದ ದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಕೃಷಿಕರಿಗೆ ಬೆಳೆ ನಷ್ಟದ ಭೀತಿ ಕಾಡಲಿದೆ. ದೇವತಾ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 7

ಸಿಂಹ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಅನುಕೂಲಕರ ವಾತಾವರಣವಿರಲಿದೆ. ಮನಸ್ಸಿನಲ್ಲಿ ಅಂದುಕೊಂಡ ಕೆಲಸ ಕಾರ್ಯಗಳನ್ನು ಸುಗಮವಾಗಿ ನೆರವೇರಿಸಲಿದ್ದೀರಿ. ಹಿರಿಯರಿಗೆ ದೇವಾಲಯ ಸಂದರ್ಶನ ಯೋಗವಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ. ಶುಭ ಸಂಖ್ಯೆ: 5

ಕನ್ಯಾ: ಬೇರೆಯವರು ನಿಮ್ಮ ಬಗ್ಗೆ ಏನು ತಿಳಿದುಕೊಳ್ಳುವರೋ ಎನ್ನುವ ಚಿಂತೆ ಬಿಟ್ಟು ನಿಮ್ಮ ಕರ್ತವ್ಯದತ್ತ ಗಮನ ಕೊಡಿ. ನೆರೆಹೊರೆಯವರ ಮಾತುಗಳಿಗೆ ತಲೆಕೆಡಿಸಿಕೊಳ್ಳಬೇಕಿಲ್ಲ. ಶೈಕ್ಷಣಿಕ ರಂಗದಲ್ಲಿ ಮುನ್ನಡೆ ಪಡೆಯುವಿರಿ. ಪ್ರೀತಿ ಪಾತ್ರರ ಭೇಟಿ ಸಾಧ‍್ಯತೆ. ಶುಭ ಸಂಖ್ಯೆ: 1

ತುಲಾ: ಅನಿವಾರ್ಯ ಕಾರಣಗಳಿಗೆ ದೂರ ಸಂಚಾರ ಮಾಡಬೇಕಾಗಿ ಬರಲಿದೆ. ಬಂಧು ಮಿತ್ರರ ಭೇಟಿಯಾಗುವ ಸಾಧ‍್ಯತೆಯಿದೆ. ವೃತ್ತಿರಂಗದಲ್ಲಿ ಮೇಲಧಿಕಾರಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ತಾಳ್ಮೆಯಿಂದಿರಿ. ಶುಭ ಸಂಖ್ಯೆ: 7

ವೃಶ್ಚಿಕ: ಪ್ರೀತಿ ಪಾತ್ರರೊಂದಿಗೆ ಕೆಲವು ಸಮಯ ಕಳೆಯಲು ಮನಸ್ಸು ಹಾತೊರೆಯುವುದು. ಅವಿವಾಹಿತರಿಗೆ ವಿವಾಹ ಮಾತುಕತೆಗಳು ಸ್ವಲ್ಪದರಲ್ಲೇ ತಪ್ಪಿ ಹೋಗಿ ಬೇಸರವಾಗಬಹುದು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ವಿರಾಮ ಸಿಗಲಿದೆ. ಶುಭ ಸಂಖ್ಯೆ: 6

ಧನು: ದೇಹಾರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾಗಲಿದೆ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ. ವಿದ್ಯಾರ್ಥಿಗಳು ಹೊಸ ಪರೀಕ್ಷೆಗೆ ಸಿದ್ಧರಾಗಬೇಕಾಗುತ್ತದೆ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ. ಶುಭ ಸಂಖ್ಯೆ: 2

ಮಕರ: ವ್ಯಾಪಾರೀ ವರ್ಗದವರು ವ್ಯವಹಾರದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾಣುವರು. ಕ್ರಿಯಾತ್ಮಕ ಯೋಚನೆಗಳಿಂದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಿರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಕಿರು ಓಡಾಟ ನಡೆಸಬೇಕಾಗುತ್ತದೆ. ಶುಭ ಸಂಖ್ಯೆ: 8

ಕುಂಭ: ದೂರ ಸಂಚಾರದಲ್ಲಿ ವಿಘ್ನಗಳು ಎದುರಾಗಲಿವೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಆರ್ಥಿಕವಾಗಿ ಹೊಸ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ವೃತ್ತಿರಂಗದಲ್ಲಿ ಅಡೆತಡೆಗಳಿದ್ದರೂ ಕಾರ್ಯಸಾಧನೆಯಾಗಲಿದೆ. ಶುಭ ಸಂಖ್ಯೆ: 3

ಮೀನ: ಹಿರಿಯರ ಮಾರ್ಗದರ್ಶನದಂತೆ ನಡೆದುಕೊಂಡರೆ ಶ್ರೇಯೋಭಿವೃದ್ಧಿ ಕಂಡುಬರುವುದು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಸಂಗಾತಿಯೊಂದಿಗೆ ಚರ್ಚಿಸಲಿದ್ದೀರಿ. ನೂತನ ದಂಪತಿಗಳಿಗೆ ಮಧುರ ಕ್ಷಣ ಕಳೆಯುವ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಶುಭ ಸಂಖ್ಯೆ: 5

 

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:17 am, Sun, 28 February 21

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us