Daily Horoscope ದಿನ ಭವಿಷ್ಯ: ಸಿಂಹ ರಾಶಿಯವರಿಗೆ ಆರ್ಥಿಕ ಸಂಕಷ್ಟಗಳು ಪರಿಹಾರ
ದಿನ ಭವಿಷ್ಯ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಷಷ್ಠಿ ತಿಥಿ, ಗುರುವಾರ, 4 ಮಾರ್ಚ್ 2021. ವಿಶಾಖ ನಕ್ಷತ್ರ.
ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಷಷ್ಠಿ ತಿಥಿ, ಗುರುವಾರ, 4 ಮಾರ್ಚ್ 2021. ವಿಶಾಖ ನಕ್ಷತ್ರ, ರಾಹುಕಾಲ: ಮಧ್ಯಾಹ್ನ 1:56 ಮಧ್ಯಾಹ್ನ ಸಂಜೆ 3:24 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.32. ಸೂರ್ಯಾಸ್ತ: ಸಂಜೆ 6.23.
ದಿನಾಂಕ04-03-2021 ರ ಗುರುವಾರದ ರಾಶಿಭವಿಷ್ಯ ಮೇಷ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 7
ವೃಷಭ:ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವದು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 2
ಮಿಥುನ:ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು.ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವದು. ಶುಭ ಸಂಖ್ಯೆ: 9
ಕರ್ಕ: ಅಪಮಾನ,ಅಪವಾದದಂತಹ ಸಮಸ್ಸೆಗೆ ಸಿಲುಕದಂತೆ ಜಾಗರೂಕರಾಗಿರಿ.ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವದು ಉತ್ತಮ.ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು. ಶುಭ ಸಂಖ್ಯೆ: 4
ಸಿಂಹ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವದು.ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 1
ಕನ್ಯಾ: ಅಗೌರವ ಆಗುವ ಸಂಭವ ಇರುವದರಿಂದ ಸೂಕ್ಷ್ಮವಾಗಿರುವದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವದು ಸರಿಯಲ್ಲ. ಮಕ್ಕಳ ಚಿಂತೆ ಇರುವದು. ವಧುವರರಿಗೆ ಮದುವೆಯ ಯೋಗ ಕೂಡಿಬರುವದು. ಶುಭ ಸಂಖ್ಯೆ: 6
ತುಲಾ: ಉದ್ಯೋಗ ಬದಲಿ ಮಾಡುವದು ಸದ್ಯ ಬೇಡ.ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವದು. ಶುಭ ಸಂಖ್ಯೆ: 5
ವೃಶ್ಚಿಕ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ.ವ್ಯಾಪಾರವೃದ್ಧಿಯಾಗುವದು. ಆರ್ಥಿಕ ಸಂಕಷ್ಟ ದೂರಾಗುವದು. ಶುಭ ಸಂಖ್ಯೆ: 8
ಧನು: ಮಾನಸಮ್ಮಾನಗಳು ದೊರೆಯುವವು. ಕಂಕಣಬಲ ಕೂಡಿಬರುವದು. ಮನೋಭಿಲಾಷೆಗಳು ಈಡೇರುವವು. ಆದರೆ ಉದ್ಯೋಗದಲ್ಲಿ ನಿರಾಸಕ್ತಿಯನ್ನು ಇರುವದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುವದು. ಶುಭ ಸಂಖ್ಯೆ: 3
ಮಕರ: ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವದು. ಅಡೆತಡೆಗಳ ನಿವಾರಣೆ ಯಾಗುವದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವದಿಲ್ಲ. ಹಿರಿಯರ ಸಲಹೆ ದೊರೆಯುವದು. ಶುಭ ಸಂಖ್ಯೆ: 7
ಕುಂಭ: ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಶುಭ ಸಂಖ್ಯೆ: 2
ಮೀನ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಶುಭ ಸಂಖ್ಯೆ: 9
ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937
Published On - 6:27 am, Thu, 4 March 21