AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope ದಿನ ಭವಿಷ್ಯ: ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶ ಸಿಗುವ ಸಾಧ್ಯತೆ

ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಸಪ್ತಮಿ ತಿಥಿ, ಶುಕ್ರವಾರ, 05 ಮಾರ್ಚ್​​ 2021. ಅನೂರಾಧ ನಕ್ಷತ್ರದ ರಾಶಿ ಭವಿಷ್ಯ.

Daily Horoscope ದಿನ ಭವಿಷ್ಯ: ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶ ಸಿಗುವ ಸಾಧ್ಯತೆ
ರಾಶಿ ಭವಿಷ್ಯ
ರಾಜೇಶ್ ದುಗ್ಗುಮನೆ
| Edited By: |

Updated on: Mar 05, 2021 | 6:45 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಸಪ್ತಮಿ ತಿಥಿ, ಶುಕ್ರವಾರ, 05 ಮಾರ್ಚ್​​ 2021. ಅನೂರಾಧ ನಕ್ಷತ್ರ, ರಾಹುಕಾಲ: ಬೆಳಿಗ್ಗೆ 10: 58 ಇಂದ ಮಧ್ಯಾಹ್ನ 12 ಗಂ: 27ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.31. ಸೂರ್ಯಾಸ್ತ: ಸಂಜೆ 6.23.

ದಿನಾಂಕ 04-03-2021ರ ಗುರುವಾರದ ರಾಶಿಭವಿಷ್ಯ

ಮೇಷ: ಮೇಲಧಿಕಾರಿಗಳ ಕಿರಿ ಕಿರಿಯಿಂದ ಮನಸ್ಸಿಗೆ ಬೇಸರವಾಗಲಿದೆ. ಉದ್ಯೋಗ ಬದಲಾವಣೆಗೆ ಮನಸ್ಸು ಬಯಸುವುದು. ಕ್ರಿಯಾತ್ಮಕ ಕೆಲಸಗಳಿಗೆ ಚಾಲನೆ ನೀಡಿ. ಮಹಿಳೆಯರಿಗೆ ಅಪವಾದದ ಭೀತಿಯಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಶುಭ ಸಂಖ್ಯೆ: 8

ವೃಷಭ: ಹಿರಿಯರಿಗೆ ದೇವಾಲಯ ಸಂದರ್ಶನ ಯೋಗವಿದೆ. ಸರಕಾರಿ ಲೆಕ್ಕಪತ್ರಗಳನ್ನು ಸಂರಕ್ಷಿಸುವ ಹೊಣೆಗಾರಿಕೆ ನಿಮ್ಮ ಮೇಲಿರಲಿದೆ. ಅನಿರೀಕ್ಷಿತವಾಗಿ ಧನಲಾಭವಾಗಲಿದೆ. ದೇವತಾ ಕಾರ್ಯಗಳಿಗೆ ಚಾಲನೆ ನೀಡಲಿದ್ದೀರಿ. ವಿನಾಕಾರಣ ಖರ್ಚು ವೆಚ್ಚ ಮಾಡಬೇಡಿ. ಶುಭ ಸಂಖ್ಯೆ: 2

ಮಿಥುನ: ದಾಯಾದಿಗಳೊಂದಿಗೆ ನಿಮ್ಮ ಕಲಹಕ್ಕೆ ಹಿರಿಯರ ಮಧ್ಯಸ್ಥಿಕೆಯಿಂದ ಪರಿಹಾರ ಸಿಗಲಿದೆ. ಶುಭ ಮಂಗಲ ಕಾರ್ಯ ನೆರವೇರಲಿದ್ದು, ಮನಸ್ಸಯಲ್ಲಿ ಬಂಧು ಮಿತ್ರರ ಆಗಮನದಿಂದ ಸಂತಸದ ವಾತಾವರಣವಿರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ. ಶುಭ ಸಂಖ್ಯೆ: 5

ಕರ್ಕಟಕ: ಅನುವಂಶಿಕ ಖಾಯಿಲೆಗಳು ಮತ್ತೆ ಮರುಕಳಿಸಲಿವೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಅವಿವಾಹಿತರಿಗೆ ಶೀ‍‍ಘ್ರ ಕಂಕಣ ಬಲ ಕೂಡಿಬರಲಿದೆ. ಇಷ್ಟಮಿತ್ರರ ಭೇಟಿಯೋಗವಿದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಕಡೆಗೆ ಗಮನ ಹರಿಸಲಿದ್ದಾರೆ. ಶುಭ ಸಂಖ್ಯೆ: 7

ಸಿಂಹ: ನೂತನ ದಂಪತಿಗಳಿಗೆ ಸಂತಾನ ಫಲ ಭಾಗ್ಯವಿದೆ. ಕೌಟುಂಬಿಕವಾಗಿ ಸುಮಧುರ ಕ್ಷಣಗಳನ್ನು ಕಳೆಯಲಿದ್ದೀರಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆಗಳಾದೀತು. ಕಠಿಣಪರಿಶ್ರಮ ಪಟ್ಟರೆ ತಕ್ಕ ಫಲ ಸಿಕ್ಕೀತು. ಶುಭ ಸಂಖ್ಯೆ: 1

ಕನ್ಯಾ: ಸರ್ಕಾರಿ ಅಧಿಕಾರಿಗಳಿಗೆ ಉತ್ತಮ ಆದಾಯ ಗಳಿಕೆಯಾಗಲಿದೆ. ಕೆಟ್ಟ ಸ್ನೇಹ ಸಂಗದಿಂದ ದೂರವಿರುವುದೇ ಉತ್ತಮ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಲಿದ್ದೀರಿ. ಮಹಿಳೆಯರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸವಾಗಬಹುದು. ಶುಭ ಸಂಖ್ಯೆ: 8

ತುಲಾ: ಬಂಧು ವರ್ಗದವರ ಜತೆಗೂಡಿ ಶುಭ ಮಂಗಲ ಕಾರ್ಯದಲ್ಲಿ ಸಂಭ್ರಮಿಸಲಿದ್ದೀರಿ. ವಾಸಸ್ಥಳ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ಒದಗಿ ಬರಲಿವೆ. ಶುಭ ಸಂಖ್ಯೆ: 3

ವೃಶ್ಚಿಕ: ಪೋಷಕರಿಗೆ ಮಕ್ಕಳ ವಿದ್ಯಾಭ‍್ಯಾಸದ ಬಗ್ಗೆ ಚಿಂತೆ ಕಾಡಲಿದೆ. ಹಿರಿಯರ ಮನಸ್ಸಿಗೆ ನೋವುಂಟು ಮಾಡದಂತೆ ನೋಡಿಕೊಳ್ಳಿ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು. ಎಚ್ಚರಿಕೆ ಅಗತ್ಯ. ಶುಭ ಸಂಖ್ಯೆ: 6

ಧನು: ವೃತ್ತಿರಂಗದಲ್ಲಿ ಎಲ್ಲವೂ ನಿಮ್ಮ ಅನುಕೂಲಕ್ಕೆ ತಕ್ಕಂತೆ ನಡೆಯುವುದರಿಂದ ಚಿಂತೆ ಬೇಡ. ವಿದ್ಯಾರ್ಥಿಗಳಿಗೆ ಏಕಾಗ್ರತತೆಯ ಕೊರತೆ ಉಂಟಾಗಲಿದೆ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳ ಬಗ್ಗೆ ಎಚ್ಚರಿಕೆ ವಹಿಸಿ. ಚಿಂತೆ ಬೇಡ. ಶುಭ ಸಂಖ್ಯೆ: 4

ಮಕರ: ಮನಸ್ಸಿನಲ್ಲಿ ಅಂದುಕೊಂಡ ಕಾರ್ಯಗಳನ್ನು ಕಾರ್ಯಗತಗೊಳಿಸಲು ಇದು ಸಕಾಲ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಆದರೆ ಮಾತಿನ ಮೇಲೆ ನಿಗಾ ಇರಲಿ. ನೂತನ ದಂಪತಿಗಳು ದೇವಾಲಯ ಸಂದರ್ಶನ ಮಾಡಲಿದ್ದಾರೆ. ಶುಭ ಸಂಖ್ಯೆ: 6

ಕುಂಭ: ಮಹಿಳೆಯರಿಗೆ ಬಿಡುವಿಲ್ಲದ ಕೆಲಸದಿಂದ ದೈಹಿಕ, ಮಾನಸಿಕ ಶ್ರಮ ತಪ್ಪದು. ಆದರೆ ನಿಮ್ಮ ವರ್ತನೆ, ಮಾತಿನ ಮೇಲೆ ತಾಳ್ಮೆಯಿಲ್ಲದೇ ಹೋದರೆ ಇತರರ ಮನಸ್ಸಿಗೆ ಬೇಸರವಾದೀತು. ಮಕ್ಕಳ ಆರೋಗ್ಯ ಚಿಂತೆಗೆ ಕಾರಣವಾದೀತು. ದೇವತಾ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 2

ಮೀನ: ಇಷ್ಟ ಮಿತ್ರರೊಂದಿಗೆ ಪ್ರವಾಸ ಮಾಡಲಿದ್ದೀರಿ. ಮನಸ್ಸಿಗೆ ಖುಷಿ ಕೊಡುವ ಕೆಲಸ ಮಾಡುವುದರಿಂದ ನೆಮ್ಮದಿ ಪಡೆಯುವಿರಿ. ಮಹಿಳೆಯರಿಗೆ ಉಡುಗೊರೆಗಳು ಸಿಗಲಿವೆ. ಕಿರು ಓಡಾಟ ನಡೆಸಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಶುಭ ಸಂಖ್ಯೆ:7

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!