Daily Horoscope ದಿನ ಭವಿಷ್ಯ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗ; ಆರ್ಥಿಕ ಸಂಕಷ್ಟ ಪರಿಹಾರ

06 ಮಾರ್ಚ್​​ 2021: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಅಷ್ಟಮಿ ತಿಥಿ, ಶನಿವಾರ, ಜ್ಯೇಷ್ಠ ನಕ್ಷತ್ರ, ರಾಹುಕಾಲ: ಬೆಳಿಗ್ಗೆ 09: 29 ರಿಂದ 10 ಗಂ: 58ರ ತನಕ

Daily Horoscope ದಿನ ಭವಿಷ್ಯ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗ; ಆರ್ಥಿಕ ಸಂಕಷ್ಟ ಪರಿಹಾರ
Follow us
Skanda
| Updated By: ಪೃಥ್ವಿಶಂಕರ

Updated on: Mar 06, 2021 | 7:03 AM

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಅಷ್ಟಮಿ ತಿಥಿ, ಶನಿವಾರ, 06 ಮಾರ್ಚ್​​ 2021. ಜ್ಯೇಷ್ಠ ನಕ್ಷತ್ರ, ರಾಹುಕಾಲ: ಬೆಳಿಗ್ಗೆ 09: 29 ರಿಂದ 10 ಗಂ: 58ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.31. ಸೂರ್ಯಾಸ್ತ: ಸಂಜೆ 6.23.

ದಿನಾಂಕ 06-03-2021ರ ಶನಿವಾರದ ರಾಶಿಭವಿಷ್ಯ

ಮೇಷ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು.ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ:5

ವೃಷಭ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ:7

ಮಿಥುನ: ವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವುದು. ಶುಭ ಸಂಖ್ಯೆ:1

ಕಟಕ: ಭವಿಷ್ಯತ್ತಿನ ಉಪೇಕ್ಷೆ ಮಾಡದೇ ಉಳಿತಾಯಕ್ಕೆ ಗಮನಹರಿಸಿರಿ. ಆಪತ್ತುಗಳ ಪರಿಹಾರಕ್ಕಾಗಿ ವ್ಯಥಾ ತಿರುಗಾಟದ ಸಂಭವವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ:9

ಸಿಂಹ: ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವುದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ. ಶುಭ ಸಂಖ್ಯೆ:4

ಕನ್ಯಾ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುತ್ತವೆ. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ:2

ತುಲಾ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ:7

ವೃಶ್ಚಿಕ: ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವುದು. ಸಹನೆಯಿಂದ ವ್ಯವಹರಿಸಿರಿ.ಗುರುಬಲ ವೃದ್ಧಿಸುವುದು. ಮದುವೆಯ ಸಂಭ್ರಮದ ವಾತಾವರಣ ಕಂಡುಬರುವುದು. ಹಿರಿಯರ ಮಾತಿನಂತೆ ನಡೆಯುವುದು ಉತ್ತಮ. ಶುಭ ಸಂಖ್ಯೆ:8

ಧನು: ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವುದು ಒಳ್ಳೆಯದು. ಮಂಗಳಕಾರ್ಯ ಆಗಲಿದೆ. ಹೆಸರು, ಕಡಲೆ ದಾನ ಮಾಡಿರಿ. ಶುಭ ಸಂಖ್ಯೆ:3

ಮಕರ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ:6

ಕುಂಭ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವುದು. ಗುರುಬಲ ವೃದ್ಧಿಸುವುದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ಶುಭ ಸಂಖ್ಯೆ:7

ಮೀನ: ವಾದ-ವಿವಾದ, ಹಟ ಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವುದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ. ಶುಭ ಸಂಖ್ಯೆ:9

Basavaraj guruji

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!