ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಅಷ್ಟಮಿ ತಿಥಿ, ಶನಿವಾರ, 06 ಮಾರ್ಚ್ 2021. ಜ್ಯೇಷ್ಠ ನಕ್ಷತ್ರ, ರಾಹುಕಾಲ: ಬೆಳಿಗ್ಗೆ 09: 29 ರಿಂದ 10 ಗಂ: 58ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.31. ಸೂರ್ಯಾಸ್ತ: ಸಂಜೆ 6.23.
ದಿನಾಂಕ 06-03-2021ರ ಶನಿವಾರದ ರಾಶಿಭವಿಷ್ಯ
ಮೇಷ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು.ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ:5
ವೃಷಭ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ:7
ಮಿಥುನ: ವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವುದು. ಶುಭ ಸಂಖ್ಯೆ:1
ಕಟಕ: ಭವಿಷ್ಯತ್ತಿನ ಉಪೇಕ್ಷೆ ಮಾಡದೇ ಉಳಿತಾಯಕ್ಕೆ ಗಮನಹರಿಸಿರಿ. ಆಪತ್ತುಗಳ ಪರಿಹಾರಕ್ಕಾಗಿ ವ್ಯಥಾ ತಿರುಗಾಟದ ಸಂಭವವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ:9
ಸಿಂಹ: ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವುದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ. ಶುಭ ಸಂಖ್ಯೆ:4
ಕನ್ಯಾ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುತ್ತವೆ. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ:2
ತುಲಾ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ:7
ವೃಶ್ಚಿಕ: ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವುದು. ಸಹನೆಯಿಂದ ವ್ಯವಹರಿಸಿರಿ.ಗುರುಬಲ ವೃದ್ಧಿಸುವುದು. ಮದುವೆಯ ಸಂಭ್ರಮದ ವಾತಾವರಣ ಕಂಡುಬರುವುದು. ಹಿರಿಯರ ಮಾತಿನಂತೆ ನಡೆಯುವುದು ಉತ್ತಮ. ಶುಭ ಸಂಖ್ಯೆ:8
ಧನು: ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವುದು ಒಳ್ಳೆಯದು. ಮಂಗಳಕಾರ್ಯ ಆಗಲಿದೆ. ಹೆಸರು, ಕಡಲೆ ದಾನ ಮಾಡಿರಿ. ಶುಭ ಸಂಖ್ಯೆ:3
ಮಕರ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ:6
ಕುಂಭ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವುದು. ಗುರುಬಲ ವೃದ್ಧಿಸುವುದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ಶುಭ ಸಂಖ್ಯೆ:7
ಮೀನ: ವಾದ-ವಿವಾದ, ಹಟ ಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವುದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ. ಶುಭ ಸಂಖ್ಯೆ:9