Horoscope ದಿನ ಭವಿಷ್ಯ | ಸಿಂಹ ರಾಶಿಯವರಿಗೆ ಆರ್ಥಿಕ ಸಂಕಷ್ಟಗಳು ಪರಿಹಾರವಾಗುತ್ತದೆ..

Daily Horoscope In Kannada: ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ಏಕಾದಶಿ, ಗುರುವಾರ, ಮಾರ್ಚ್ 25, 2021. ಆಶ್ಲೇಷ ನಕ್ಷತ್ರ ರಾಶಿ ಭವಿಷ್ಯ.

Horoscope ದಿನ ಭವಿಷ್ಯ | ಸಿಂಹ ರಾಶಿಯವರಿಗೆ ಆರ್ಥಿಕ ಸಂಕಷ್ಟಗಳು ಪರಿಹಾರವಾಗುತ್ತದೆ..
ದಿನ ಭವಿಷ್ಯ
Edited By: ಆಯೇಷಾ ಬಾನು

Updated on: Mar 25, 2021 | 6:24 AM

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ಏಕಾದಶಿ, ಗುರುವಾರ, ಮಾರ್ಚ್ 25, 2021. ಆಶ್ಲೇಷ ನಕ್ಷತ್ರ, ರಾಹುಕಾಲ : ಇಂದು ಮಧ್ಯಾಹ್ನ 1: 52 ಇಂದ ಮಧ್ಯಾಹ್ನ 3:23 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.16. ಸೂರ್ಯಾಸ್ತ: ಸಂಜೆ 6.27.

ತಾ.25-03-2021 ರ ಗುರುವಾರದ ರಾಶಿಭವಿಷ್ಯ

ಮೇಷ: ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 3

ವೃಷಭ: ಮನೆಯಲ್ಲಿ ಅಸಮಾಧಾನ ಇರುವುದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ.ವ್ಯಾಪಾರ ವೃದ್ಧಿಯಾಗುವದು. ಶುಭ ಸಂಖ್ಯೆ: 8

ಮಿಥುನ: ಅಪಮಾನ,ಅಪವಾದದಂತಹ ಸಮಸ್ಸೆಗೆ ಸಿಲುಕದಂತೆ ಜಾಗರೂಕರಾಗಿರಿ.ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವದು ಉತ್ತಮ.ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು. ಶುಭ ಸಂಖ್ಯೆ: 6

ಕರ್ಕ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು.ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಶುಭ ಸಂಖ್ಯೆ: 9

ಸಿಂಹ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವದು.ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 1

ಕನ್ಯಾ: ವಸ್ತು-ವಾಹನ-ಆಸ್ತಿ ಖರೀದಿ ಯೋಗವಿದೆ.ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಮನೆಯ ಹಿರಿಯರ ಆರೋಗ್ಯದ ಚಿಂತೆ ಇರುವದು. ಬುದ್ಧಿವಂತಿಕೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 5

ತುಲಾ:ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 7

ವೃಶ್ಚಿಕ: ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವದು. ಶುಭ ಸಂಖ್ಯೆ: 7

ಧನು: ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವದು. ಶ್ರಮಿಕವರ್ಗಕ್ಕೆ ಉನ್ನತಿ ಇರುವದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವದು. ಶುಭ ಸಂಖ್ಯೆ: 3

ಮಕರ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 8

ಕುಂಭ: ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವದು. ಮನೋಚಿಂತಿತ ಕಾರ್ಯ ಕೈಗೂಡುವದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭ ಸಂಖ್ಯೆ: 3

ಮೀನ: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 2

 


ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:22 am, Thu, 25 March 21

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us