AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಭವಿಷ್ಯ | ಫೆಬ್ರವರಿ 01, 2021

ಫೆಬ್ರವರಿ 01,202ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನಭವಿಷ್ಯ.

ದಿನಭವಿಷ್ಯ | ಫೆಬ್ರವರಿ 01, 2021
ಫೆಬ್ರವರಿ ದಿನ ಭವಿಷ್ಯ
ರಾಜೇಶ್ ದುಗ್ಗುಮನೆ
| Updated By: ಆಯೇಷಾ ಬಾನು|

Updated on:Feb 01, 2021 | 6:30 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಪುಷ್ಯಮಾಸ, ಹೇಮಂತ ಋತು, ಕೃಷ್ಣಪಕ್ಷ, ಚೌತಿ ತಿಥಿ, ಸೋಮವಾರ, ಫೆಬ್ರವರಿ 01,2021. ಉತ್ತರೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 8:13 ಗಂಟೆಯಿಂದ ರಿಂದ ರಾತ್ರಿ 09:38 ಗಂಟೆ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.48. ಸೂರ್ಯಾಸ್ತ: ಸಂಜೆ 6.11.

ತಾ.01-02-2021 ರ ಸೋಮವಾರದ ರಾಶಿಭವಿಷ್ಯ (ಪೆಬ್ರವರಿ ಮಾಸಕ್ಕೆ ಶುಭಂ)

ಮೇಷ: ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 6

ವೃಷಭ: ಎಲ್ಲವೂ ಇದ್ದಂತೆ ಇರಲಿ ಎಂಬ ಮನೋಭಾವನೆ ಇರುವದು. ಕೆಲಸದಲ್ಲಿ ಬದಲಾವಣೆ ತರಲು ಪ್ರಯತ್ನಿಸಿ. ವಿದೇಶ ಪ್ರಯಾಣದ ಯೋಗವಿದೆ.ಉದ್ಯೋಗದಲ್ಲಿ ಪ್ರಗತಿ ಮುಂದುವರೆಯುವದು. ಶುಭ ಸಂಖ್ಯೆ: 3

ಮಿಥುನ: ಎಲ್ಲವನ್ನು ಹಗುರವಾಗಿ ಕಾಣುವದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 8

ಕರ್ಕ: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ: 1

ಸಿಂಹ:ಅನಾವಶ್ಯಕ ತಿರುಗಾಟದಿಂದ ಆಲಸ್ಯ. ದುರ್ಜನರ ಸಹವಾಸ ದೋಷ ಕಂಡುಬರುವದು. ಐಷಾರಾಮಿ ವಸ್ತುಗಳ ಖರೀದಿ ಸಂಭವ. ವ್ಯಾಪಾರ-ಉದ್ಯಮಗಳಲ್ಲಿ ತೃಪ್ತಿದಾಯಕ ಲಾಭವಿರುವದು. ವಿದ್ಯಾರ್ಥಿಗಳಿಗೆ ಹಿನ್ನಡೆ ಇರುವದು. ಶುಭ ಸಂಖ್ಯೆ: 4

ಕನ್ಯಾ: ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವದು. ಸಂಕಷ್ಟಗಳ ಪರಿಹಾರಕ್ಕಾಗಿ ಅಲೆದಾಡಬೇಕಾದ ಸಂಭವವಿದೆ. ಶುಭ ಸಂಖ್ಯೆ: 9

ತುಲಾ: ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 7

ವೃಶ್ಚಿಕ: ವ್ಯಾಪಾರದಲ್ಲಿ ಪ್ರಗತಿ ಇರುವದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವದು. ಶುಭ ಸಂಖ್ಯೆ: 5

ಧನು: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು. ಶುಭ ಸಂಖ್ಯೆ: 8

ಮಕರ: ವ್ಯವಹಾರಿಕ ಏಳ್ಗೆ ಇರುವದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ.ವಿವಿಧ ಸೌಭಾಗ್ಯಪ್ರಾಪ್ತಿ..ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್,ವಾಹನ,ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ: 3

ಕುಂಭ: ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ. ಶುಭ ಸಂಖ್ಯೆ: 7

ಮೀನ: ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವದು. ಶುಭ ಸಂಖ್ಯೆ: 3

ಡಾ. ಬಸವರಾಜ್ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)

ದಿನಭವಿಷ್ಯ: ದ್ವಾದಶ ರಾಶಿಗಳ ಇಂದಿನ (31-01-2021) ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ ಖ್ಯಾತ ಜ್ಯೋತಿಷಿ ಡಾ.ಬಸವರಾಜ ಗುರೂಜಿ

Published On - 6:30 am, Mon, 1 February 21