ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಪುಷ್ಯಮಾಸ, ಹೇಮಂತ ಋತು, ಕೃಷ್ಣಪಕ್ಷ, ಪಂಚಮಿ ತಿಥಿ, ಮಂಗಳವಾರ, ಫೆಬ್ರವರಿ 2, 2021. ಹಸ್ತ ನಕ್ಷತ್ರ, ರಾಹುಕಾಲ: ಇಂದು ಸಂಜೆ 3.20ರಿಂದ ಸಂಜೆ 4.45. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.47. ಸೂರ್ಯಾಸ್ತ: ಸಂಜೆ 6.11.
ತಾ.2-02-2021 ರ ಮಂಗಳವಾರದ ರಾಶಿಭವಿಷ್ಯ
ಮೇಷ: ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 5
ವೃಷಭ: ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಅನವಶ್ಯಕ ಭಯ ಅಗತ್ಯವಿಲ್ಲ, ನಿಮ್ಮ ಸೇವೆ ಫಲ ನೀಡುವದು. ಸಂಕಷ್ಟದ ಮಧ್ಯೆಯೂ ಸಂತೋಷದ ದಿನಗಳಿವೆ. ಆಗಂತುಕರೊಂದಿಗೆ ಜಾಗೃತೆ ಅಗತ್ಯ. ಶುಭ ಸಂಖ್ಯೆ: 2
ಮಿಥುನ: ಆತ್ಮೀಯರೊಂದಿಗೆ ಮನಸ್ತಾಪ ವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು. ಶುಭ ಸಂಖ್ಯೆ: 8
ಕಟಕ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 8
ಸಿಂಹ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 1
ಕನ್ಯಾ: ಅಭದ್ರತೆ ಕಾಡುವ ಸಂಭವವಿದೆ. ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ. ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವುದು. ಶುಭ ಸಂಖ್ಯೆ: 4
ತುಲಾ: ಸಾಲಗಾರರ ತೊಂದರೆ ಇರುವುದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ. ಶುಭ ಸಂಖ್ಯೆ: 6
ವೃಶ್ಚಿಕ: ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು. ಶುಭ ಸಂಖ್ಯೆ: 3
ಧನು: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವದು. ಶುಭ ಸಂಖ್ಯೆ: 9
ಮಕರ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 5
ಕುಂಭ: ಆರಂಭದಲ್ಲಿ ಹರ್ಷ, ಉತ್ಸಾಹ ಇರುವದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ. ಶುಭ ಸಂಖ್ಯೆ: 4
ಮೀನ: ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ, ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು.ಸಭಾಸಮಾಜ ಕೀರ್ತಿ ಲಭಿಸುವುದು. ಶುಭ ಸಂಖ್ಯೆ: 9