ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಪುಷ್ಯಮಾಸ, ಹೇಮಂತ ಋತು, ಕೃಷ್ಣಪಕ್ಷ, ಷಷ್ಠಿ ತಿಥಿ, ಬುಧವಾರ, ಫೆಬ್ರವರಿ 3, 2021. ಚಿತ್ತೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.29 ರಿಂದ ಮಧ್ಯಾಹ್ನ 1.54. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.47. ಸೂರ್ಯಾಸ್ತ: ಸಂಜೆ 6.12.
ತಾ.03-02-2021 ರ ಬುಧವಾರದ ರಾಶಿಭವಿಷ್ಯ
ಮೇಷ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. ಶುಭ ಸಂಖ್ಯೆ: 5
ವೃಷಭ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭ ಸಂಖ್ಯೆ: 9
ಮಿಥುನ: ಪರಿವಾರದಲ್ಲಿ ಹೊಸಕಳೆ ಬರುವುದು. ಕುಟುಂಬದಲ್ಲಿ ಸುಖ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು. ಶುಭ ಸಂಖ್ಯೆ: 1
ಕಟಕ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 4
ಸಿಂಹ: ಧಾರ್ಮಿಕ ಕ್ಷೇತ್ರದಲ್ಲಿ ಗೌರವ ಸಮ್ಮಾನಗಳು ದೊರೆಯುವವು. ಅತಿಯಾದ ನಿರೀಕ್ಷೆಯಿಂದ ಅಸಮಾಧಾನ ಕಂಡುಬರುವುದು. ದೂರುವವರೇ ಹೊಗಳಿದರೂ ನೆಮ್ಮದಿ ಇರಲಾರದು. ಸ್ವಯಂ ಪ್ರತಿಷ್ಟೆಗೆ ಧನವ್ಯಯ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 7
ಕನ್ಯಾ: ಹೊಸ ಆಲೋಚನೆಯೊಂದು ಕಾರ್ಯರೂಪಕ್ಕೆ ಬರುವುದು. ಸಹವರ್ತಿಗಳ ಅಸಹಕಾರ ಇದ್ದರೂ ತೊಂದರೆ ಆಗಲಾರದು. ಅನಪೇಕ್ಷಿತ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ. ಸರಿಯಾದ ಧ್ಯೇಯದಿಂದ ಸಮಾಧಾನ ಇರುವುದು. ಶುಭ ಸಂಖ್ಯೆ: 6
ತುಲಾ: ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ, ಅಪೇಕ್ಷಿತ ಕೆಲಸಗಳು ನೆರವೇರುವವು, ಧನಲಾಭ, ವಿದ್ಯಾರ್ಥಗಳು, ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ. ಆಲಸ್ಯದಿಂದ ತೊಂದರೆ ಇರುವದು ಗುರುಸ್ತೋತ್ರ ಪಾರಾಯಣ ಮಾಡಿರಿ. ಶುಭ ಸಂಖ್ಯೆ: 2
ವೃಶ್ಚಿಕ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಬಂಧಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 8
ಧನು: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವುದು. ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಭ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ. ಶುಭ ಸಂಖ್ಯೆ: 7
ಮಕರ: ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವವು. ಹಳೆಯ ಸಮಸ್ಯಗಳು ಪರಿಹಾರವಾಗುವವು. ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಶುಭ ಸಂಖ್ಯೆ: 3
ಕುಂಭ: ಹಣಕಾಸಿನ ವ್ಯವಹಾರದಲ್ಲಿ ಧ್ಯರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಿಸದ ಲಾಭ ಸಂಭವ. ಗಡಿಬಿಡಿಯ ವಾತಾವತರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ. ಶುಭ ಸಂಖ್ಯೆ: 6
ಮೀನ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 4
ಬಸವರಾಜ ಗುರೂಜಿ
(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)