Horoscope ದಿನಭವಿಷ್ಯ | ಫೆಬ್ರವರಿ 05, 2021

Horoscope ಫೆಬ್ರವರಿ 05, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನಭವಿಷ್ಯ.

Horoscope ದಿನಭವಿಷ್ಯ | ಫೆಬ್ರವರಿ 05, 2021
ದಿನ ಭವಿಷ್ಯ
Follow us
ಆಯೇಷಾ ಬಾನು
|

Updated on: Feb 05, 2021 | 6:51 AM

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಪುಷ್ಯಮಾಸ, ಹೇಮಂತ ಋತು, ಕೃಷ್ಣಪಕ್ಷ, ಅಷ್ಟಮಿ ತಿಥಿ, ಶುಕ್ರವಾರ, ಫೆಬ್ರವರಿ 5, 2021. ವಿಶಾಖ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 11.3 ರಿಂದ ಬೆಳಿಗ್ಗೆ 12.28. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.46. ಸೂರ್ಯಾಸ್ತ: ಸಂಜೆ 6.13.

ತಾ.05-02-2021 ರ ಶುಕ್ರವಾರದ ರಾಶಿಭವಿಷ್ಯ

ಮೇಷ: ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 1

ವೃಷಭ: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 6

ಮಿಥುನ: ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವುದು. ಶುಭ ಸಂಖ್ಯೆ: 9

ಕಟಕ: ತಪ್ಪುಗಳನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 5

ಸಿಂಹ: ಅನಿಸಿಕೆಗಿಂತವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 4

ಕನ್ಯಾ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 2

ತುಲಾ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 7

ವೃಶ್ಚಿಕ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 3

ಧನು: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು. ಶುಭ ಸಂಖ್ಯೆ: 4

ಮಕರ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 7

ಕುಂಭ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 9

ಮೀನ: ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವುದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆಕಳೆದುಕೊಳ್ಳದೇ ಮುಂದುವರೆಯಿರಿ. ಶುಭ ಸಂಖ್ಯೆ: 8

ಡಾ. ಬಸವರಾಜ್ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ