Horoscope ದಿನಭವಿಷ್ಯ | ಸಹನೆ ಕಳೆದುಕೊಂಡರೆ ಹಾನಿ ಸಂಭವ, ಮಕರ ರಾಶಿಯವರಿಂದು ಎಚ್ಚರಿಕೆಯಿಂದಿರಬೇಕು

Horoscope ಫೆಬ್ರವರಿ 06, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನಭವಿಷ್ಯ.

Horoscope ದಿನಭವಿಷ್ಯ | ಸಹನೆ ಕಳೆದುಕೊಂಡರೆ ಹಾನಿ ಸಂಭವ, ಮಕರ ರಾಶಿಯವರಿಂದು ಎಚ್ಚರಿಕೆಯಿಂದಿರಬೇಕು
ದಿನ ಭವಿಷ್ಯ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Feb 06, 2021 | 2:31 PM

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಪುಷ್ಯಮಾಸ, ಹೇಮಂತ ಋತು, ಕೃಷ್ಣಪಕ್ಷ, ನವಮಿ ತಿಥಿ, ಶನಿವಾರ, ಫೆಬ್ರವರಿ 6, 2021. ಅನೂರಾಧ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.37 ರಿಂದ ಬೆಳಿಗ್ಗೆ 11.2. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.46. ಸೂರ್ಯಾಸ್ತ: ಸಂಜೆ 6.13.

ತಾ.06-02-2021 ರ ಶನಿವಾರದ ರಾಶಿಭವಿಷ್ಯ

ಮೇಷ: ಸಾಲಗಾರರ ತೊಂದರೆ ಇರುವುದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವುದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ. ಶುಭ ಸಂಖ್ಯೆ: 6

ವೃಷಭ: ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವುದು. ಶುಭ ಸಂಖ್ಯೆ: 8

ಮಿಥುನ: ಆದಾಯ ಹೆಚ್ಚುವುದು. ವ್ಯವಹಾರಿಕ ಏಳ್ಗೆ ಇರುವುದು. ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವುದು. ಶಾಂತಚಿತ್ತರಾಗಿ ವ್ಯವಹರಿಸಿರಿ. ಕೆಲಸದಲ್ಲಿ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಶುಭ ಸಂಖ್ಯೆ: 3

ಕಟಕ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 1

ಸಿಂಹ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 4

ಕನ್ಯಾ: ಉದರಬೇನೆ ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ. ಬಂಧುಮಿತ್ರರ ಭೇಟಿ, ಮನೆಯಲ್ಲಿ ಮಂಗಲಕಾರ್ಯ ಜರುಗುವ ಯೋಗವಿದೆ. ಕೋರ್ಟ್​ನಲ್ಲಿರುವ ವ್ಯಾಜ್ಯಗಳು ಕೊನೆಗೊಳ್ಳುವವು. ಶುಭ ಸಂಖ್ಯೆ: 7

ತುಲಾ: ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ. ಶುಭ ಸಂಖ್ಯೆ: 9

ವೃಶ್ಚಿಕ: ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವವು. ಸಾಲ ಮರುಪಾವತಿಯಾಗುವದು. ಮನೆಯಲ್ಲಿ ನೆಮ್ಮದಿ ಇರುವುದು. ಅವಿವಾಹಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 3

ಧನು: ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಮಾನಸಿಕ ಉತ್ಸಾಹ ಕಂಡುಬರುವುದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವುದು. ಕಾರಣಾಂತರ ಅಧಿಕ ಖರ್ಚುಬರಬಹುದು. ಶುಭ ಸಂಖ್ಯೆ: 1

ಮಕರ: ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವ ಎಚ್ಚರಿಕೆ ವಹಿಸಿರಿ. ಅನೀರೀಕ್ಷಿತವಾಗಿ ಬರುವ ವಿಘ್ನಗಳು ತಾವಾಗಿಯೇ ಪರಿಹಾರ ಕಾಣುವವು. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಶುಭ ಸಂಖ್ಯೆ: 5

ಕುಂಭ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು. ಶುಭ ಸಂಖ್ಯೆ: 6

ಮೀನ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಶುಭ ಸಂಖ್ಯೆ: 9

ಡಾ. ಬಸವರಾಜ್ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)

Published On - 6:48 am, Sat, 6 February 21

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ