AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಭವಿಷ್ಯ | ಜನವರಿ 16, 2021

ಜನವರಿ 16, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನಭವಿಷ್ಯ.

ದಿನಭವಿಷ್ಯ | ಜನವರಿ 16, 2021
ದಿನ ಭವಿಷ್ಯ
ಆಯೇಷಾ ಬಾನು
ಆಯೇಷಾ ಬಾನು|

Updated on: Jan 16, 2021 | 6:19 AM

Share

ನಿತ್ಯ ಪಂಚಾಂಗ: ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ತದಿಗೆ ತಿಥಿ, ಶನಿವಾರ, ಜನವರಿ 16, 2021. ಶತಭಿಷೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.36 ರಿಂದ ಬೆಳಿಗ್ಗೆ 10.59. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.49. ಸೂರ್ಯಾಸ್ತ: ಸಂಜೆ 6.01.

ತಾ.16-01-2021 ರ ಶನಿವಾರದ ರಾಶಿಭವಿಷ್ಯ

ಮೇಷ: ಪರಿವಾರದಲ್ಲಿ ಹೊಸಕಳೆ ಬರುವುದು. ಕುಟುಂಬದಲ್ಲಿ ಸುಖಯ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು. ಶುಭ ಸಂಖ್ಯೆ: 5

ವೃಷಭ: ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವುದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ. ದೂರಪ್ರಯಾಣ ಯೋಗವಿದೆ. ಶುಭ ಸಂಖ್ಯೆ: 8

ಮಿಥುನ: ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವುದು. ಹಳೆಯ ಸಾಲ ತೀರುವುದು. ಅನೇಕ ಮೂಲಗಳಿಂದ ಧನಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವವು. ಶುಭ ಸಂಖ್ಯೆ: 1

ಕಟಕ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. ಶುಭ ಸಂಖ್ಯೆ: 9

ಸಿಂಹ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು. ಶುಭ ಸಂಖ್ಯೆ: 7

ಕನ್ಯಾ: ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವುದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರಿಯಿರಿ. ಶುಭ ಸಂಖ್ಯೆ: 6

ತುಲಾ: ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವವು. ಸಾಲ ಮರುಪಾವತಿಯಾಗುವುದು. ಮನೆಯಲ್ಲಿ ನೆಮ್ಮದಿ ಇರುವುದು. ಅವಿವಾಹಿತರಿಗೆ ಕಂಕಣಬಲ ಕೂಡಿಬರುವದು. ಶುಭ ಸಂಖ್ಯೆ: 3

ವೃಶ್ಚಿಕ: ಅಭದ್ರತೆ ಕಾಡುವ ಸಂಭವವಿದೆ. ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ. ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವುದು. ಶುಭ ಸಂಖ್ಯೆ: 4

ಧನು: ಸಾಲಗಾರರ ತೊಂದರೆ ಇರುವುದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವುದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ. ಶುಭ ಸಂಖ್ಯೆ: 7

ಮಕರ: ಮನಸ್ಸಿನಂತೆಯೇ ಎಲ್ಲ ಕೆಲಸಗಳೂ ಪೂರ್ಣವಾಗುವವು. ಉದ್ಯೋಗಸ್ಥಾನದಲ್ಲಿ ಕಾರ್ಯಭಾರ ಹೆಚ್ಚುವುದು. ಆಸ್ತಿ ಸಂಬಂಧಿತ ವಿಷಯದಲ್ಲಿ ವಂಚನೆಯಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತೋಷದ ಕಾರ್ಯಗಳು ನೆರವೇರುವವು. ಶುಭ ಸಂಖ್ಯೆ: 8

ಕುಂಭ:ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 3

ಮೀನ: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು. ಶುಭ ಸಂಖ್ಯೆ: 5

ಡಾ.ಬಸವರಾಜ್ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!