AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಭವಿಷ್ಯ | ಜನವರಿ 17, 2021

ಜನವರಿ 17, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನಭವಿಷ್ಯ.

ದಿನಭವಿಷ್ಯ | ಜನವರಿ 17, 2021
ದಿನ ಭವಿಷ್ಯ
ಪೃಥ್ವಿಶಂಕರ
|

Updated on: Jan 17, 2021 | 7:13 AM

Share

ತಾ.17-1-2021 ರ ಭಾನುವಾರದ ರಾಶಿಭವಿಷ್ಯ

ಮೇಷ: ಉದ್ಯೋಗ ಬದಲಿ ಮಾಡುವದು ಸದ್ಯ ಬೇಡ.ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವದು. ಶುಭ ಸಂಖ್ಯೆ: 9

ವೃಷಭ: ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವದು. ಶ್ರಮಿಕವರ್ಗಕ್ಕೆ ಉನ್ನತಿ ಇರುವದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವದು. ಶುಭ ಸಂಖ್ಯೆ: 5

ಮಿಥುನ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 8

ಕರ್ಕ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವದು.ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ.ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು.ನ್ಯಾಯಾಲಯದಲ್ಲಿ ಜಯ ದೊರೆಯುವದು. ವಿದ್ಯೆಯಲ್ಲಿ ಸಾಧನೆ ಇರುವದು. ಶುಭ ಸಂಖ್ಯೆ: 6

ಸಿಂಹ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧನಾರ್ಜನೆ ಯಾಗುವುದು ವಿದೇಶಪ್ರಯಾಣ, ಪ್ರೇಮಸಂಭಾಷಣೆ, ದೇವ ಬ್ರ್ರಾಹ್ಮಣ,ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು. ಶುಭ ಸಂಖ್ಯೆ: 7

ಕನ್ಯಾ: ಎಲ್ಲವೂ ಇದ್ದಂತೆ ಇರಲಿ ಎಂಬ ಮನೋಭಾವನೆ ಇರುವದು. ಕೆಲಸದಲ್ಲಿ ಬದಲಾವಣೆ ತರಲು ಪ್ರಯತ್ನಿಸಿ. ವಿದೇಶ ಪ್ರಯಾಣದ ಯೋಗವಿದೆ.ಉದ್ಯೋಗದಲ್ಲಿ ಪ್ರಗತಿ ಮುಂದುವರೆಯುವದು. ಶುಭ ಸಂಖ್ಯೆ: 4

ತುಲಾ: ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭ, ಐಶ್ವರ್ಯವೃದ್ಧಿಯಿದೆ. ಆದರೆ ವ್ಯವಹಾರಿಕ ಕಿರಿಕಿರಿ ಇರುವದು. ಅನಿರೀಕ್ಷಿತ ಧನಲಾಭವೂ ಇದೆ. ಕೈಗೊಂಡ ಕಾರ್ಯಗಳಿಗೆ ವಿಘ್ನ ತೋರಿದರೂ ನೆರವೇರುತ್ತದೆ. ಶುಭ ಸಂಖ್ಯೆ: 2

ವೃಶ್ಚಿಕ: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವದು. ಶುಭ ಸಂಖ್ಯೆ: 1

ಧನು: ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ.ದೂರಪ್ರಯಾಣ ಯೋಗವಿದೆ. ಶುಭ ಸಂಖ್ಯೆ: 5

ಮಕರ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವದು. ಶುಭ ಸಂಖ್ಯೆ: 3

ಕುಂಭ: ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ. ಶುಭ ಸಂಖ್ಯೆ: 6

ಮೀನ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವದು. ಶುಭ ಸಂಖ್ಯೆ: 9

ಡಾ.ಬಸವರಾಜ್ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!